ಮೈಲಾರ ಲಿಂಗೇಶ್ವರ ಜಾತ್ರೆ ನಿಮಿತ್ತ ವಿಶೇಷ ಬಸ್ ಸೌಕರ್ಯ
ದಾವಣಗೆರೆ : ಇಲ್ಲಿಗೆ ಸಮೀಪದ ಮೈಲಾರದಲ್ಲಿ ಫೆಬ್ರವರಿ 8ರಿಂದ 12ರವರೆಗೆ ನಡೆಯಲಿರುವ ಶ್ರೀ ಮೈಲಾರ ಲಿಂಗೇಶ್ವರ ಜಾತ್ರೆ ಪ್ರಯುಕ್ತ ದಾವಣಗೆರೆ ಜಿಲ್ಲೆ ಹಾಗೂ ಇನ್ನಿತರ ಪ್ರಮುಖ ಪಟ್ಟಣಗಳಿಂದ ನೂರಕ್ಕೂ ಹೆಚ್ಚು ವಿಶೇಷ ಬಸ್ಗಳನ್ನು ಓಡಿಸಲು ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ನಿರ್ಧರಿಸಿದೆ.
ಈ ಸಂಬಂಧ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ ಎನ್ನುತ್ತಾರೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಚ್.ಜಿ. ತೆಂಬದ್. ಭಕ್ತಾದಿಗಳ ಅನುಕೂಲಕ್ಕಾಗಿ ಹಾಗೂ ಅಗತ್ಯಕ್ಕನುಗುಣವಾಗಿ ನೂರರಿಂದ ನೂರಿಪ್ಪತ್ತು ಕೆಎಸ್ಸಾರ್ಟಿಸಿ ಬಸ್ಗಳನ್ನು ಓಡಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.
ಮೈಲಾರ ಲಿಂಗೇಶ್ವರನ ಜಾತ್ರೆಗೆ ಸಾಮಾನ್ಯವಾಗಿ ಜಿಲ್ಲೆಯಿಂದ ಭಾರಿ ಸಂಖ್ಯೆಯಲ್ಲಿ ಭಕ್ತಾದಿಗಳು ಹೋಗುತ್ತಾರೆ. ಬಸ್ ಸೌಕರ್ಯವಿಲ್ಲದ ಕಾರಣ ಅವರು ರಹದಾರಿ ಇಲ್ಲದ ಬಸ್ಸು, ಲಾರಿ, ವ್ಯಾನ್ಗಳನ್ನು ಆಶ್ರಯಿಸುತ್ತಿದ್ದರು. ಇದರಿಂದ ಪ್ರಯಾಣಿಕರಿಗೆ ಉಂಟಾಗುತ್ತಿದ್ದ ತೊಂದರೆಯನ್ನು ಮನಗಂಡು ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದೂ ಅವರು ಹೇಳಿದ್ದಾರೆ.
ಜಿಲ್ಲೆಯ ಹರಿಹರ, ಹರಪನಹಳ್ಳಿ, ಜಗಳೂರು ಹಾಗೂ ಇನ್ನಿತರ ಕಡೆಗಳಿಂದ ಮೈಲಾರ ಲಿಂಗೇಶ್ವರ ಜಾತ್ರೆ ವಿಶೇಷ ಬಸ್ಗಳು ಸಂಚರಿಸಲಿವೆ. ಈ ಸೌಲಭ್ಯದ ಪ್ರಯೋಜನ ಪಡೆಯುವಂತೆ ಅವರು ಕೋರಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications