ತಿರುಮಕೂಡಲುವಿನಲ್ಲಿ ದಕ್ಷಿಣ ಕುಂಭಮೇಳ ವಿಧ್ಯುಕ್ತವಾಗಿ ಪ್ರಾರಂಭ
ತಿರುಮಕೂಡಲು : ಆದಿಚುಂಚನಗಿರಿ ಮಠಾಧೀಶ ಬಾಲಗಂಗಾಧರನಾಥ ಸ್ವಾಮೀಜಿ, ಓಂಕಾರಾಶ್ರಮದ ಶಿವಪುರಿ ಸ್ವಾಮೀಜಿ ಹಾಗೂ ರಾಜ ರಾಜೇಶ್ವರಿ ಪೀಠದ ತಿರುಚಿ ಸ್ವಾಮೀಜಿ ಅವರು ಇಲ್ಲಿನ ಪವಿತ್ರ ಅಗಸ್ತ್ಯೇಶ್ವರ ದೇವಾಲಯದಲ್ಲಿ ಜಂಟಿಯಾಗಿ ಪೂಜೆ ಸಲ್ಲಿಸುವುದರೊಂದಿಗೆ ದಕ್ಷಿಣ ಕುಂಭಮೇಳ ಬುಧವಾರ ವಿಧ್ಯುಕ್ತವಾಗಿ ಪ್ರಾರಂಭವಾಯಿತು.
ಕಾವೇರಿ, ಕಪಿಲಾ ಹಾಗೂ ಸ್ಪಟಿಕ ಸರೋವರಗಳ ತ್ರಿವೇಣಿ ಸಂಗಮದಲ್ಲಿ ಕುಂಭಮೇಳದ ಪ್ರಯುಕ್ತ ನೂರಾರು ಭಕ್ತರು ಪುಣ್ಯಸ್ನಾನ ಮಾಡಿದರು . ಉತ್ತರದ ಕುಂಭಮೇಳಕ್ಕೆ ಪರ್ಯಾಯವೆಂದು ಭಾವಿಸಿರುವ ಹಾಗೂ ದಕ್ಷಿಣ ಕುಂಭಮೇಳ ಎಂದು ಭಾವಿಸಿರುವ ಈ ಉತ್ಸವದಲ್ಲಿ ಭಾಗವಹಿಸಲು ರಾಜ್ಯ ಹಾಗೂ ನೆರೆ ರಾಜ್ಯಗಳ ನೂರಾರು ಧಾರ್ಮಿಕ ಶ್ರದ್ಧಾವಂತರು ಆಗಮಿಸುತ್ತಿದ್ದಾರೆ.
ಉತ್ಸವ ಕಾಲದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪಾಲನೆಗಾಗಿ ಜಿಲ್ಲಾಡಳಿತ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಿದೆ. 1200 ಪೊಲೀಸರೊಂದಿಗೆ ಹೋಂಗಾರ್ಡ್ಗಳು ಕೂಡ ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.
(ಯುಎನ್ಐ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications