ಅನುಕಂಪಕ್ಕೆ ಇಲ್ಲಿ ಜಾಗವೇ ಇಲ್ಲ, ಅಭಯಹಸ್ತವೇಚಾಚಿದೆ ಅಲ್ಲೆಲ್ಲಾ
ಬೆಂಗಳೂರು : ಗುಜರಾತ್‌ನಲ್ಲಿ ಗಢಗಢ ನಡುಗಿ ತನ್ನ ಸಾವಿರಾರು ಮಕ್ಕಳನ್ನು ತಾನೇ ನುಂಗಿದ ವಸುಂಧರೆಯ ಮುನಿಸಿಗೆ ಕಲ್ಲು ಹೃದಯಿಗಳೂ ಕಂಬನಿ ಮಿಡಿದಿದ್ದಾರೆ. ನಮ್ಮ ದೇಶದ ಭಾಗವೊಂದರ ಜನತೆ ಸಾವು ನೋವಿನ ಸಂಕಟದಲ್ಲಿರುವಾಗ ನಾವು ಸಂತಸದ ಸಮಾರಂಭಗಳನ್ನು ಮಾಡಿ, ಸಾವಿರಾರು ರುಪಾಯಿ ಖರ್ಚು ಮಾಡುವುದು ಬೇಡ ಎಂಬ ನಿಲುವನ್ನು ಕನ್ನಡನಾಡಿನ ಅನೇಕ ಸಂಘ ಸಂಸ್ಥೆಗಳು ತಳೆದಿದ್ದಾರೆ. ಈ ನಿಲವು ಸ್ವಾಗತಾರ್ಹ.
ರಾಜಕೀಯ : ರಾಜಕೀಯ, ಸಾಹಿತ್ಯ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೂ ಈ ಪಟ್ಟಿಯಲ್ಲಿ ಸೇರಿವೆ. ಜನವರಿ 26ರಂದು ಧರೆ ನಡುಗಿದ ತತ್‌ಕ್ಷಣವೆ ರದ್ದಾದ ಕಾರ್ಯಕ್ರಮಗಳಲ್ಲಿ ಪ್ರಮುಖವಾದದ್ದು, ರಾಜ್ಯದಲ್ಲಿ ಸಮಾವೇಶಗೊಳ್ಳಲಿದ್ದ ಕಾಂಗ್ರೆಸ್ ರಾಷ್ಟ್ರೀಯ ಅಧಿವೇಶನ.
ಸಾಹಿತ್ಯ - ಸಂಸ್ಕೃತಿ : ಇದರ ಬೆನ್ನಲ್ಲೇ ಫೆ.2ರಂದು ಕವಿಶೈಲದಲ್ಲಿ ಹಾಗೂ ಕುಪ್ಪಳ್ಳಿಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಸ್ಮಾರಕ ಹಾಗೂ ಭವನವನ್ನು ರಾಷ್ಟ್ರಕ್ಕೆ ಸಮರ್ಪಿಸುವ ಸಾಹಿತ್ಯಿಕ ಕಾರ್ಯಕ್ರಮದ ಮುಂದೂಡಿಕೆ. ರಾಜ್ಯದ ಹಲವು ಪ್ರತಿಷ್ಠಿತ ಶಾಲೆ ಕಾಲೇಜುಗಳ ಪೂರ್ವ ನಿಗದಿತ ಕಾಲೇಜ್ ಡೇ, ಸ್ಕೂಲ್ ಡೇಗಳೂ ರದ್ದಾದವು. ಈ ಸಮಾರಂಭಕ್ಕೆ ಮಾಡಲುದ್ದೇಶಿಸಿದ್ದ ಹಣವನ್ನು ಸಂಸ್ಥೆಗಳು ಗುಜರಾತ್ ಭೂಕಂಪ ಪರಿಹಾರ ನಿಧಿಗೆ ಅರ್ಪಿಸಿದವು.
ಧಾರ್ಮಿಕ : ಈಗ ಇದೇ ಕಾರಣಕ್ಕಾಗಿ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಅಡ್ಡಪಲ್ಲಕ್ಕಿ ಉತ್ಸವವೂ ರದ್ದಾದ ಸುದ್ದಿ ಹಾಸನದಿಂದ ಬಂದಿದೆ. ಅಲ್ಲಿ ಭಾನುವಾರ ನಡೆದ ತರಳಬಾಳು ಹುಣ್ಣಿಮೆ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮಿಗಳು ಈ ವಿಷಯ ತಿಳಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications