ಜಲಸಂವರ್ಧನೆ ಯೋಜನೆಯಡಿ 25 ಸಾವಿರ ಕೆರೆಗಳ ಪುನಶ್ಚೇತನ
ತುಮಕೂರು : ಅಂತರ್ಜಲ ಮಟ್ಟ ಕಾಪಾಡಲು ಹಾಗೂ ನೀರಿನ ಬವಣೆ ನೀಗಿಸಲು ಜಲಸಂವರ್ಧನೆ ಯೋಜನೆ ಅಡಿಯಲ್ಲಿ 25 ಸಾವಿರ ಕೆರೆಗಳನ್ನು ಪುನಶ್ಚೇತನಗೊಳಿಸಲು ವಿಶ್ವಬ್ಯಾಂಕ್ ಒಂದು ಸಾವಿರ ಕೋಟಿ ರು. ನೆರವು ನೀಡಲು ಸಮ್ಮತಿ ನೀಡಿದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ತಿಳಿಸಿದ್ದಾರೆ.
ಸೋಮವಾರ ಜಿಲ್ಲೆಯ ಸುಮಾರು 80 ಗ್ರಾಮಗಳಿಗೆ ಆಶಾಕಿರಣವಾದ 66 ಕೆ.ವಿ. ವಿದ್ಯುತ್ ಉಪಸ್ಥಾವರಕ್ಕೆ ಶಂಕುಸ್ಥಾಪನೆ ನೆರವೇರಿಸಿ, ಮಾತನಾಡುತ್ತಿದ್ದ ಅವರು, ನಮ್ಮ ಪೂರ್ವಜರು ನಿರ್ಮಿಸಿದ ಕೆರೆಗಳನ್ನು ಸಂರಕ್ಷಿಸುವ ಸಲುವಾಗಿ ಜಲಸಂವರ್ಧನೆ ಕಾರ್ಯಕ್ರಮ ಜಾರಿಗೆ ತರಲಾಗಿದೆ ಎಂದರು.
ವಿಶ್ವಬ್ಯಾಂಕ್ ನೀಡುವ ನೆರವಿನಲ್ಲಿ ಈಗ ಆಯ್ದ 25 ಸಾವಿರ ಕೆರೆಗಳ ಪುನಶ್ಚೇತನ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು. ಹಾಲಿ ರಾಜ್ಯದಲ್ಲಿ 50 ಸಾವಿರ ಕೆರೆಗಳನ್ನು ಗುರುತಿಸಲಾಗಿದೆ ಎಂದರು. ಈ ಕೆರೆಗಳ ನೀರಿನ ನಿರ್ವಹಣೆಗೆ ನೀರು ಬಳಕೆದಾರರ ಸಂಘ ಸ್ಥಾಪಿಸಿ ಸಂಪೂರ್ಣ ಮೇಲ್ವಿಚಾರಣೆಯನ್ನು ಕೆರೆಗಳ ನೀರಿನ ಫಲಾನುಭವಿಗಳಿಗೆ ವಹಿಸಲಾಗುವುದು ಇದಕ್ಕೂ ವಿಶ್ವಬ್ಯಾಂಕ್ ಒಪ್ಪಿಗೆ ನೀಡಿದೆ ಎಂದರು.
ನಬಾರ್ಡ್ ನೆರವು : ರಾಜ್ಯದ ರಸ್ತೆಗಳ ಅಭಿವೃದ್ಧಿಗೆ ನಬಾರ್ಡ್ನಿಂದ 1200 ಕೋಟಿ ರುಪಾಯಿ ಸಾಲ ತರುತ್ತಿದ್ದು, ಮುಂದಿನ ನಾಲ್ಕು ವರ್ಷಗಳಲ್ಲಿ ರಾಜ್ಯದ ಎಲ್ಲ ರಸ್ತೆಗಳ ದುರಸ್ತಿ ಹಾಗೂ ಅಭಿವೃದ್ಧಿ ಕಾರ್ಯ ನೆರವೇರಲಿದೆ. ತೀವ್ರ ನಷ್ಟ ಅನುಭವಿಸುತ್ತಿರುವ ವಿದ್ಯುತ್ ಪ್ರಸರಣ ನಿಗಮವನ್ನು ಮೇಲೆತ್ತಲೂ ಪ್ರಯತ್ನ ಮಾಡಲಾಗುತ್ತಿದೆ ಎಂದೂ ಕೃಷ್ಣ ತಿಳಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications