ಏರೋ ಇಂಡಿಯಾ-2001 ಪ್ರದರ್ಶನಕ್ಕೆ ಎಸ್.ಎಂ. ಕೃಷ್ಣ ಬಹಿಷ್ಕಾರ
ಬೆಂಗಳೂರು : ಬಾನಂಗಳದಲ್ಲಿ ಹಾರಾಡುವ ದೇಶ ವಿದೇಶಗಳ ಬಣ್ಣ ಬಣ್ಣದ ವಿಮಾನಗಳ ಸಾಹಸವನ್ನು ಕಾಣಲು ಬೆಂಗಳೂರಿಗರು ತುದಿಗಾಲಲ್ಲಿ ನಿಂತಿದ್ದರೆ, ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಈ ಪ್ರದರ್ಶನದ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ ಹಾಕುವ ತೀರ್ಮಾನ ಕೈಗೊಂಡಿದ್ದಾರೆ.
ಏರೋ ಇಂಡಿಯಾ 2001 ಪ್ರದರ್ಶನ ಬೆಂಗಳೂರಿನಲ್ಲೇ ನಡೆಯುತ್ತಿದ್ದರೂ ಕೂಡ ರಾಜ್ಯ ಸರಕಾರವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಕೇಂದ್ರ ರಕ್ಷಣಾ ಸಚಿವಾಲಯ ಏರ್ಪಡಿಸಿರುವ ಈ ಅಂತಾರಾಷ್ಟ್ರೀಯ ವಿಮಾನ ಪ್ರದರ್ಶನದ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆಯಲ್ಲಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಹೆಸರಾಗಲೀ ಅಥವಾ ಅವರ ಸಚಿವ ಸಂಪುಟದ ಮತ್ತಾವುದೇ ಸಚಿವರ ಹೆಸರೂ ಇಲ್ಲದಿರುವುದು ಕೃಷ್ಣ ಅವರಿಗೆ ನೋವುಂಟು ಮಾಡಿದೆ.
ಈ ಮಧ್ಯೆ ಪ್ರದರ್ಶನದ ಉದ್ಘಾಟನಾ ಸಮಾರಂಭಕ್ಕೆ ವೇದಿಕೆ ಸಜ್ಜಾಗಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ರಕ್ಷಣಾ ಸಚಿವ ಜಾರ್ಜ್ ಫನಾಂಡಿಸ್ ಮತ್ತು ನಾಗರಿಕ ವಿಮಾನ ಯಾನ ಖಾತೆ ಸಚಿವ ಶರದ್ ಯಾದವ್ ಬೆಂಗಳೂರಿಗೆ ಆಗಮಿಸಿದ್ದಾರೆ. ಕೃಷ್ಣರ ಪ್ರತಿಭಟನೆಯ ಸುದ್ದಿ ತಿಳಿದು ಜಾರ್ಜ್ ಫರ್ನಾಂಡಿಸ್ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ ಎಂದೂ ಮೂಲಗಳು ಹೇಳಿವೆ.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications