ಕಾರ್ಕಳ : ನಾಲ್ಕು ಕೋತಿಗಳ ಸಾವು, ಜನರಲ್ಲಿ ಮಂಗನಕಾಯಿಲೆ ಭೀತಿ
ಉಡುಪಿ : ಕಾರ್ಕಳ ತಾಲ್ಲೂಕಿನ ದೊಡ್ಡಬೆಟ್ಟುವಿನಲ್ಲಿ ಕಳೆದ ವಾರ ಸಂಭವಿಸಿದ ನಾಲ್ಕು ಕೋತಿಗಳ ಸಾವು, ಸುತ್ತಮುತ್ತಲ ಗ್ರಾಮಗಳ ನಿವಾಸಿಗಳಲ್ಲಿ ಮಂಗನ ಕಾಯಿಲೆ (ಮೆದುಳು ಜ್ವರ)ಯ ಭೀತಿ ಮೂಡಿಸಿದೆ.
ಜನವರಿ 31 ಹಾಗೂ ಫೆ.1 ರಂದು ಕೋತಿಗಳ ಸಾವು ಸಂಭವಿಸಿದೆ. ಉಡುಪಿ ಜಿಲ್ಲಾ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಮಲೇರಿಯಾ ಅಧಿಕಾರಿ ಹಾಗೂ ಕಾರ್ಕಳ ತಾಲ್ಲೂಕು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಧಾವಿಸಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗನಕಾಯಿಲೆಯ ಲಕ್ಷಣಗಳು ಯಾರಲ್ಲೂ ಇಲ್ಲ ಎಂದು ಖಚಿತಪಡಿಸಿದ್ದಾರೆ. ಈ ಪ್ರದೇಶಗಳ ಜನರು ತಮ್ಮ ನಿತ್ಯದ ಕಾರ್ಯಗಳಿಗಾಗಿ ಅರಣ್ಯಕ್ಕೆ ತೆರಳುವ ಸಂದರ್ಭದಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕೆಂದು ಅವರು ಎಚ್ಚರಿಕೆ ನೀಡಿದ್ದಾರೆ.
ಸತ್ತ ಕೋತಿಯ ಶವವೊಂದನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದಲ್ಲಿನ ವೈರಸ್ ತಪಾಸಣಾ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಉಳಿದ ಕೋತಿಗಳ ಶವವನ್ನು ಮುಂಜಾಗರೂಕತಾ ಕ್ರಮವಾಗಿ ಸುಡಲಾಗಿದೆ. ಕೋತಿಗಳ ಸಾವು ಕಂಡುಬಂದ ಸ್ಥಳದ 50 ಮೀಟರ್ಗಳ ಸುತ್ತಮುತ್ತ ಕ್ರಿಮಿನಾಶಕ ಸಿಂಪಡಿಸಲಾಗಿದೆ ಎಂದು ಅಧಿಕಾರಿಯಾಬ್ಬರು ತಿಳಿಸಿದ್ದಾರೆ.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications