ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಇಳಿಕೆ ಪರಿಶೀಲನೆ

By Staff
|
Google Oneindia Kannada News

ನವದೆಹಲಿ : ಕೇಂದ್ರ ಸರಕಾರಿ ನೌಕರರ ನಿವೃತ್ತಿ ವಯಸ್ಸನ್ನು ಅರವತ್ತು ವರ್ಷಗಳಿಂದ ಮತ್ತೆ 58ಕ್ಕೇ ಇಳಿಸುವ ಬಗ್ಗೆ ಕೇಂದ್ರ ಸರಕಾರ ಪರಿಶೀಲನೆ ನಡೆಸುತ್ತಿದೆ. ಮುಂಬರುವ ಬಜೆಟ್‌ ಅಧಿವೇಶನದಲ್ಲಿ ಕೇಂದ್ರದ ಆಯವ್ಯಯಪತ್ರ ಮಂಡಿಸುವ ಮುನ್ನ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳುವ ಸಾಧ್ಯತೆ ಇದೆ.

ಮುಂಬರುವ ಆರ್ಥಿಕ ವರ್ಷದಲ್ಲಿ ಯೋಜನೇತರ ವಿತ್ತೀಯ ಕೊರತೆಯನ್ನು ಸರಿದೂಗಿಸಲು ಈ ನಿರ್ಧಾರ ಕೈಗೊಳ್ಳುವ ಸಲುವಾಗಿ ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಸರಕಾರಿ ನೌಕರರ ಗಾತ್ರ ತಗ್ಗಿಸಬೇಕಾದ ಅನಿವಾರ್ಯತೆಯನ್ನು ಸರಕಾರ ಮನಗಂಡಿತ್ತಾದರೂ ಅದನ್ನು ಹೇಗೆ ನಿಭಾಯಿಸಬೇಕು ಎಂಬುದು ದೊಡ್ಡ ಸಮಸ್ಯೆಯಾಗಿತ್ತು.

ಇತ್ತೀಚಿನ ಭೀಕರ ಭೂಕಂಪದ ಹಿನ್ನೆಲೆಯಲ್ಲಿ ಉದ್ಭವಿಸಿರುವ ಆರ್ಥಿಕ ಬಿಕ್ಕಟ್ಟು ಈ ನಿಟ್ಟಿನಲ್ಲಿ ಮರುಚಿಂತನೆ ನಡೆಸುವಂತೆ ಮಾಡಿದೆ. ಹೊಸ ನೇಮಕಾತಿಗಳನ್ನು ಸ್ಥಗಿತಗೊಳಿಸುವಂತೆ ಕೂಡ ವಿತ್ತ ಸಚಿವಾಲಯ ಸಲಹೆ ಮಾಡಿದೆ. 1998ರಲ್ಲಿ ಐದನೇ ವೇತನ ಆಯೋಗದ ಶಿಫಾರಸಿನ ರೀತ್ಯ ನಿವೃತ್ತಿ ವಯಸ್ಸನ್ನು 58ರಿಂದ 60ಕ್ಕೆ ಏರಿಸಲಾಗಿತ್ತು.

ಸರ್ಕಾರದ ಈ ನಿರ್ಧಾರ ಜಾರಿಗೆ ಬಂದಿದ್ದೇ ಆದರೆ, 1998ರ ನಿರ್ಧಾರದ ಲಾಭ ಪಡೆದಿದ್ದ ಸಾವಿರಾರು ಕೇಂದ್ರ ಸರಕಾರಿ ನೌಕರರು ಹಾಗೂ 58ರ ಗಡಿ ತಲುಪಿರುವವರು ತತ್‌ಕ್ಷಣದಿಂದಲೇ ಜಾರಿಗೆ ಬರುವಂತೆ ನಿವೃತ್ತರಾಗುತ್ತಾರೆ. ಈ ವಿಷಯವನ್ನು ಕೇಂದ್ರ ಹಣಕಾಸು ಸಚಿವಾಲಯದ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X