ಮುಖ್ಯಮಂತ್ರಿಗಳ ನೇತೃತ್ವದಲ್ಲಿ ದೆಹಲಿಗೆ ಕಾಫಿ ಬೆಳೆಗಾರರ ನಿಯೋಗ
ಬೆಂಗಳೂರು : ಕಾಫಿ ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರಿಗೆ ನೆರವು ನೀಡುವಂತೆ ಕೇಂದ್ರಸರ್ಕಾರವನ್ನು ಒತ್ತಾಯಿಸಲು ದೆಹಲಿಗೆ ತೆರಳುವ ಸಣ್ಣ ಕಾಫಿ ಬೆಳೆಗಾರರ ನಿಯೋಗದ ನೇತೃತ್ವವನ್ನು ವಹಿಸಲು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಒಪ್ಪಿದ್ದಾರೆ.
ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅಖಿಲ ಭಾರತ ಕಾಫಿ ಕೈಗಾರಿಕೆ ಕಾರ್ಯಕಾರಿ ಸಮಿತಿಯ ಸದಸ್ಯರು, 8 ಕೋಟಿ ರುಪಾಯಿ ಕೃಷಿ ಆದಾಯ ತೆರಿಗೆ ಹಾಗೂ ಸಹಕಾರಿ ಸಾಲಗಳನ್ನು ರದ್ದು ಪಡಿಸುವಂತೆ
ಒತ್ತಾಯಿಸಿದರು. ಕಾಫಿ ಕೈಗಾರಿಕೆ 250 ಕೋಟಿ ರುಪಾಯಿಗಳ ನಷ್ಟದಲ್ಲಿರುವುದರಿಂದ ಬೆಳೆಗಾರರಿಗೆ ಸರ್ಕಾರದಿಂದ ಈ ನೆರವು ಅಗತ್ಯ ಎಂದು ಸದಸ್ಯರು ಮುಖ್ಯಮಂತ್ರಿಗಳಿಗೆ ತಿಳಿಸಿದರು.
ಆನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸಮನ್ವಯಕ ಜಿ.ಸಿ. ಬಾಲಚಂದ್ರನ್- ಕಾಫಿ ಕೃಷಿಯಲ್ಲಿ ತೊಡಗಿರುವವರಲ್ಲಿ ಪ್ರತಿಶತ 95 ರಷ್ಟು ಮಂದಿ ಸಣ್ಣ ಹಾಗೂ ಮಧ್ಯಮ ರೈತರು. ಒಟ್ಟು ಕಾಫಿ ಉತ್ಪಾದನೆಯಲ್ಲಿ ಶೇ. 60 ರಷ್ಟನ್ನು ಉತ್ಪಾದಿಸುವ ಈ ರೈತರು, ಸಹಕಾರಿ ಬ್ಯಾಂಕ್ಗಳಿಂದ 300 ಕೋಟಿ ರು. ಸಾಲವನ್ನು ಪಡೆದಿದ್ದಾರೆ. ಬೆಳೆಗಾರರು ಪ್ರಸಕ್ತ ನಷ್ಟದಲ್ಲಿರುವುದರಿಂದ ಈ ಸಾಲಗಳನ್ನು ದೀರ್ಘಾವಧಿ ಸಾಲಗಳನ್ನಾಗಿ ಪರಿವರ್ತಿಸಬೇಕು ಎಂದರು.
ಪ್ರಸಕ್ತ ವರ್ಷ ಮಾರಾಟ ತೆರಿಗೆಯನ್ನು ರದ್ದು ಪಡಿಸುವಂತೆ ಹಾಗೂ ವಾಣಿಜ್ಯ ಬ್ಯಾಂಕ್ಗಳು ನೀಡಿರುವ ಸಾಲವನ್ನು ಕೂಡಾ ದೀರ್ಘಾವಧಿ ಸಾಲಗಳನ್ನಾಗಿ ಪರಿವರ್ತಿಸಲು ಕೇಂದ್ರ ಮಧ್ಯಪ್ರವೇಶಿಸುವಂತೆ ಒತ್ತಾಯಿಸಬೇಕೆಂದು ರಾಜ್ಯ ಸರ್ಕಾರವನ್ನು ಈ ಸಂದರ್ಭದಲ್ಲಿ ಆಗ್ರಹಿಸಲಾಯಿತು.
(ಯುಎನ್ಐ)
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications