ಅಜರ್ ಹಾದಿಯಲ್ಲಿ ಜಡೇಜಾ : ಬಿಸಿಸಿಐ - ಕೇಂದ್ರ ಸರ್ಕಾರಕ್ಕೆ ನೋಟಿಸು
ನವದೆಹಲಿ : ಕ್ರಿಕೆಟ್ ಮೋಸದಾಟದ ಕಳಂಕ ಹೊತ್ತಿರುವ ಅಜಯ್ ಜಡೇಜಾ ಸಲ್ಲಿಸಿದ್ದ ಅರ್ಜಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ಬಿಸಿಸಿಐಗೆ ದೆಹಲಿ ಹೈಕೋರ್ಟ್ ನೋಟಿಸ್ ಕಳುಹಿಸಿದೆ.
ಮಾರ್ಚ್ 29, 2001 ಗಡುವಿನೊಳಗೆ ಬಿಸಿಸಿಐ ಹಾಗೂ ಸರ್ಕಾರ ಪ್ರತಿಕ್ರಿಯೆ ನೀಡುವಂತೆ ನ್ಯಾಯಮೂರ್ತಿ ವಿಜೇಂದರ್ ಜೈನ್ ಗಡುವು ಗೊತ್ತು ಪಡಿಸಿದ್ದಾರೆ. ಬಿಸಿಸಿಐ ತಮ್ಮ ಕ್ರಿಕೆಟ್ ಕೆರಿಯರ್ ಮೇಲೆ ವಿಧಿಸಿರುವ 5 ವರ್ಷಗಳ ನಿಷೇಧ ಹಾಗೂ ಸಿಬಿಐ ತನಿಖೆ ಹೊರಿಸಿರುವ ಮೋಸದಾಟ ಕಳಂಕದ ಹಿನ್ನೆಲೆಯಲ್ಲಿ ಅರ್ಜುನ ಪ್ರಶಸ್ತಿಯನ್ನೇಕೆ ವಾಪಸ್ಸು ಪಡೆಯಬಾರದು ಎನ್ನುವ ಸರ್ಕಾರದ ನೊಟೀಸ್ಗಳನ್ನು ಪ್ರಶ್ನಿಸಿ, ಫೆ. 7 ರಂದು ಜಡೇಜಾ ಕೋರ್ಟ್ ಕಟ್ಟೆ ಹತ್ತಿದ್ದರು.
ಈ ಮುನ್ನ ಬಿಸಿಸಿಐನಿಂದ ಆಜೀವ ಬಹಿಷ್ಕಾರಕ್ಕೊಳಗಾಗಿರುವ ಮಾಜಿ ಕ್ರಿಕೆಟ್ ತಾರೆ ಅಜರುದ್ದೀನ್ ಕೂಡ, ತಮಗೆ ಅನ್ಯಾಯವಾಗಿದೆ ಎಂದು ನ್ಯಾಯಾಲಯದ ಮೊರೆ ಹೋಗಿರುವುದನ್ನು ಇಲ್ಲಿ ಸ್ಮರಿಸಬಹುದು. ಮೋಸದಾಟ ಪ್ರಕರಣದಲ್ಲಿ ಆಪಾದನೆ ಹೊತ್ತಿದ್ದ ನಾಲ್ವರು ಆಟಗಾರರಲ್ಲಿ ಇಬ್ಬರು ಸರ್ಕಾರ- ಬಿಸಿಸಿಐ ತೀರ್ಮಾನವನ್ನು ಪ್ರಶ್ನಿಸಿ ನ್ಯಾಯಾಲಯದ ಕಟ್ಟೆ ಹತ್ತಿದಂತಾಯಿತು. ಇನ್ನುಳಿದಿರುವುದು ಮನೋಜ್ ಪ್ರಭಾಕರ್, ಅಜಯ್ ಶರ್ಮ ಮಾತ್ರ.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications