ಪೊಲೀಸ್ ದೌರ್ಜನ್ಯ : ಫೆ. 13, ರೈತರಿಂದ ಕರ್ನಾಟಕ ಬಂದ್
ಬೆಂಗಳೂರು : ಬೆಲೆ ಕುಸಿತ ವಿರೋಧಿಸಿ ಫೆಬ್ರವರಿ 5ರಂದು ಗುಲ್ಬರ್ಗಾ ತೊಗರಿ ಬೆಳೆಗಾರರು ಪ್ರತಿಭಟನೆ ನಡೆಸಿದ್ದು, ಆಗ ಪೊಲೀಸರು ಮನಬಂದಂತೆ ರೈತರನ್ನು ಥಳಿಸಿದ್ದು ನಿಮಗೆ ಗೊತ್ತಿರಬಹುದು. ಈ ಘಟನೆಗೆ ಕಾರಣವಾಗಿದ್ದಾರೆ ಎನ್ನಲಾದ ಅಪರ ಪೊಲೀಸ್ ಸೂಪರಿಂಟೆಂಡೆಂಟ್ ಅವರನ್ನು ಅಮಾನತ್ತುಗೊಳಿಸುವಂತೆ ಆಗ್ರಹಿಸಿ ಫೆಬ್ರವರಿ 13ರಂದು ರಾಜ್ಯಾದ್ಯಂತ ಬಂದ್ ನಡೆಸಲು ವಿವಿಧ ರೈತ ಸಂಘಟನೆಗಳು ತೀರ್ಮಾನಿಸಿವೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಭಾರತೀಯ ವ್ಯಾಪಾರಿ ಒಕ್ಕೂಟಗಳ ಕೇಂದ್ರ (ಸಿಐಟಿಯು) ದ ಅಧ್ಯಕ್ಷ ಎಸ್.ಸುಬ್ಬನಾರಾಯಣ ರಾವ್ ಈ ವಿಷಯ ತಿಳಿಸಿದರು. ಉತ್ತರ ಕರ್ನಾಟಕದ ಗುಲ್ಬರ್ಗಾ, ರಾಯಚೂರು, ವಿಜಾಪುರ ಹಾಗೂ ಕೊಪ್ಪಳಗಳಲ್ಲಿ ಪೂರ್ಣ ಬಂದ್ ಆಚರಿಸಲಾಗುವುದು. ಉಳಿದ ಜಿಲ್ಲೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದರು.
ಫೆಬ್ರವರಿ 5ರಂದು ಬೆಳೆ ಕುಸಿತದಿಂದ ಹತಾಶರಾಗಿದ್ದ ಗುಲ್ಬರ್ಗಾ ರೈತರು ಪ್ರತಿಭಟನೆ ನಡೆಸುತ್ತಿದ್ದಾಗ, ಪೊಲೀಸರು ಕೆಲವರನ್ನು ಕೈಕಟ್ಟಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಗುಲ್ಬರ್ಗಾದ ಹಾಗೂ ಇತರ ರೈತ ಮುಖಂಡರ ವಿರುದ್ಧ ದಾಖಲಿಸಿರುವ ಮೊಕದ್ದಮೆಗಳನ್ನು ವಾಪಸ್ಸು ತೆಗೆದುಕೊಳ್ಳಬೇಕು. ಪ್ರತಿ ಕ್ವಿಂಟಾಲ್ ತೊಗರಿಗೆ 2800 ರುಪಾಯಿ ಕನಿಷ್ಠ ಬೆಂಬಲ ಬೆಲೆ ನಿಗದಿ ಪಡಿಸಬೇಕು ಎಂಬುವು ನಮ್ಮ ಬೇಡಿಕೆಗಳು ಎಂದು ಸುಬ್ಬನಾರಾಯಣ ರಾವ್ ಹೇಳಿದರು.
ಸಿಐಟಿಯು ಕರೆದಿರುವ ಈ ಬಂದ್‌ಗೆ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಕರ್ನಾಟಕ ಕೃಷಿ ಕೂಲಿದಾರರ ಸಂಘ ಬೆಂಬಲ ನೀಡಿವೆ.
(ಯುಎನ್‌ಐ)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications