ಗುಜರಾತ್ನ ತಬ್ಬ-ಲಿ ಮಕ್ಕಳಿಗೆ ಸುತ್ತೂರು ಮಠದ ಸೂರು
ಮೈಸೂರು : ಗುಜರಾತ್ನ ಭೀಕರ ಭೂಕಂಪದಿಂದಾಗಿ ತಂದೆ ತಾಯಂದಿರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳನ್ನು ಸುತ್ತೂರು ಮಠ ದತ್ತು ತೆಗೆದುಕೊಳ್ಳಲಿದೆ ಎಂದು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ , ದತ್ತು ತೆಗೆದುಕೊಳ್ಳಲಾಗುವ ಮಕ್ಕಳಿಗೆ ಹತ್ತನೇ ತರಗತಿಯವರೆಗೆ ಉಚಿತ ಶಿಕ್ಷಣ ಮತ್ತು ವಸತಿ ವ್ಯವಸ್ಥೆ ಒದಗಿಸಲಾಗುವುದು. ಎಷ್ಟು ಮಂದಿ ಮಕ್ಕಳಿಗಾದರೂ ಮಠ ಸಹಕರಿಸಲು ಸಿದ್ಧವಿದೆ. ಒಂದು ವೇಳೆ ಒಂದು ಸಾವಿರಕ್ಕೂ ಹೆಚ್ಚು ಮಂದಿ ಮಕ್ಕಳನ್ನು ದತ್ತು ತೆಗೆದುಕೊಳ್ಳಬೇಕಾದ ಸಂದರ್ಭ ಬಂದಲ್ಲಿ ಮಠಾಧೀಶರು ಪ್ರಸ್ತುತ ವಾಸಿಸುತ್ತಿರುವ ಕಟ್ಟಡವನ್ನು ಮಕ್ಕಳಿಗಾಗಿ ಬಿಟ್ಟುಕೊಡಲಾಗುವುದು ಎಂದರು.
ಬಡ ಮಕ್ಕಳಿಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭವಾಗಲಿರುವ ಹೊಸ ಶಾಲೆಯಲ್ಲಿ ಗುಜರಾತಿನ ಮಕ್ಕಳನ್ನೂ ಸೇರಿಸಲಾಗುವುದು. ನಾವೇನೂ ಅತೀ ದೊಡ್ಡ ಸೇವೆ ಮಾಡುತ್ತಿಲ್ಲ . ಬದಲಾಗಿ ಪರಿಸ್ಥಿತಿಗೆ ಸ್ಪಂದಿಸುತ್ತಿದ್ದೇವೆ ಅಷ್ಟೇ ಎಂದು ಸ್ವಾಮೀಜಿ ಪತ್ರಕರ್ತರ ಪ್ರಶ್ನೆಯಾಂದಕ್ಕೆ ಉತ್ತರಿಸಿದರು.
(ಇನ್ಫೋ ವಾರ್ತೆ)
| ಮುಖಪುಟ |
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications