ಮಂಗಳೂರು ಜೋಡಿ ರೈಲು ಮಾರ್ಗ 2002 ಮಾರ್ಚ್ಗೆ ಪೂರ್ಣ
ಕೊಳಿಕ್ಕೋಡ್ : ಮಂಗಳೂರು ಹಾಗೂ ಕೋಳಿಕ್ಕೋಡ್ ನಡುವಣ ಜೋಡಿ ರೈಲು ಮಾರ್ಗದ ಕಾಮಗಾರಿ 2002ನೇ ಇಸವಿ ಮಾರ್ಚ್ ಒಳಗೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಓ . ರಾಜಗೋಪಾಲ್ ಶನಿವಾರ ಇಲ್ಲಿ ತಿಳಿಸಿದ್ದಾರೆ.
ಈ ಯೋಜನೆಗೆ ಕೇಂದ್ರ ಸರಕಾರ ಕಳೆದ ಮುಂಗಡಪತ್ರದಲ್ಲಿ 105 ಕೋಟಿ ರುಪಾಯಿ ಒದಗಿಸಿತ್ತು. ಈಗ ಈ ಮಾರ್ಗದ ಕಾಮಗಾರಿಗೆ ಹೆಚ್ಚುವರಿಯಾಗಿ 43 ಕೋಟಿ ರುಪಾಯಿ ಬಿಡುಗಡೆ ಮಾಡಲಾಗುತ್ತಿದೆ. ಕಾಮಗಾರಿ ಭರದಿಂದ ಸಾಗಿದ್ದು ಇನ್ನು 14 ತಿಂಗಳಲ್ಲಿ ಪೂರ್ಣವಾಗಲಿದೆ ಎಂದು ಅವರು ಹೇಳಿದರು.
ಮಂಗಳೂರು ಹಾಗೂ ಕೋಳಿಕ್ಕೋಡ್ ನಡುವಣ ರೈಲು ಮಾರ್ಗದಲ್ಲಿ ಬರುವ 10 ರೈಲ್ವೆ ಮೇಲು ಸೇತುವೆಗಳ ಕಾಮಗಾರಿ ಶನಿವಾರದಿಂದ ಆರಂಭಗೊಂಡಿದೆ. ರಾಜ್ಯ ಸರ್ಕಾರದ ಅಧೀನದಲ್ಲಿರುವ ರಸ್ತೆ ಮತ್ತು ಸೇತುವೆ ನಿಗಮವು ಹುಡ್ಕೋದ ಸಾಲನೆರವಿನಿಂದ ಕಾಮಗಾರಿಗೆ ಶೇ.50ರಷ್ಟು ಹಣ ನೀಡಲಿದೆ ಎಂದೂ ಅವರು ತಿಳಿಸಿದರು. ರೈಲ್ವೆ ಇಲಾಖೆಯು ಈ ಹಣವನ್ನು ಕಂತಿನ ರೂಪದಲ್ಲಿ ರಾಜ್ಯಗಳಿಗೆ ಮರುಪಾವತಿಸಲಿದೆ ಎಂದೂ ಅವರು ತಿಳಿಸಿದರು.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications