ರಾಜ್ಯದ ಹೊಸ ರೈಲ್ವೇ ಯೋಜನೆಗಳು ಸದ್ಯದಲ್ಲಿಯೇ ಸಂಪೂರ್ಣ
ಮಂಗಳೂರು : ಹಾಸನ- ಮಂಗಳೂರು ಗೇಜ್ ಬದಲಾವಣೆ ಮತ್ತು ಹುಬ್ಬಳ್ಳಿ- ಅಂಕೋಲಾ ಹೊಸ ರೈಲು ಮಾರ್ಗ ಯೋಜನೆ ಸೇರಿದಂತೆ ಶೀಘ್ರದಲ್ಲಿಯೇ ಆಗಬೇಕಾಗಿರುವ ರೈಲ್ವೇ ಕಾಮಗಾರಿಗಳ ಅಗತ್ಯವನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಪೂರೈಸಲಿವೆ ಎಂದು ಕೇಂದ್ರ ಮಂತ್ರಿ ವಿ.ಧನಂಜಯ್ ಕುಮಾರ್ ಹೇಳಿದ್ದಾರೆ.
ಶುಕ್ರವಾರ ಪುತ್ತೂರಿನಲ್ಲಿ ಸುದ್ದಿಗಾರರೊಡನೆ ಮಾತನಾಡುತ್ತಿದ್ದ ಅವರು ರಾಜ್ಯ ರೈಲ್ವೇ ಅಭಿವೃದ್ಧಿ ನಿಗಮವು ಈ ಯೋಜನೆಗಳಿಗೆ ಹಣ ಒದಗಿಸಲು ಪ್ರಯತ್ನಿಸುತ್ತಿದೆ. ರಾಜ್ಯ ಸರಕಾರದ ಮನವಿಯನ್ನು ಕೇಂದ್ರ ಅರ್ಥ ಮಂತ್ರಿ ಶೀಘ್ರವೇ ಪರಿಶೀಲಿಸಿ ಪರಿಗಣಿಸುವರು ಎಂದು ಅವರು ಹೇಳಿದರು.
70 ಕೋಟಿ ರೂಪಾಯಿ ವೆಚ್ಚದ ಮಂಗಳೂರು -ಬೆಂಗಳೂರು ರೈಲು ಮಾರ್ಗದ ಗೇಜ್ ಪರಿವರ್ತನ ಕಾರ್ಯ 2002ನೇ ಇಸವಿಯ ವೇಳೆಗೆ ಮುಗಿಯಲಿದೆ ಎಂದ ಸಚಿವರು ರಾಜ್ಯ ಸರಕಾರವು ಇತ್ತೀಚೆಗೆ ವಿದ್ಯುತ್ ದರ ಏರಿಸಿರುವುದರ ಬಗ್ಗೆ ಮಾತನಾಡುತ್ತಾ ವಿದ್ಯುತ್ ಪೂರೈಕೆಯ ಅಭಾವವನ್ನು ತಪ್ಪಿಸುವುದೇ ರಾಜ್ಯಸರಕಾರದ ಉದ್ದೇಶವಾಗಿದೆ. ರಾಜ್ಯ ವಿದ್ಯುತ್ ಪ್ರಸರಣ ನಿಗಮ ತನ್ನ ನಷ್ಟವನ್ನು ತುಂಬಲು ಪ್ರಯತ್ನಿಸುತ್ತಿದೆ ಎಂದೂ ಅವರು ಹೇಳಿದರು.
(ಯುಎನ್ಐ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications