ಮಾಜಿ ಸಚಿವ ಜೀವರಾಜ ಆಳ್ವ ದೇಹಸ್ಥಿತಿ ಗಂಭೀರ
ಬೆಂಗಳೂರು : ಮಾಜಿ ಶಿಕ್ಷಣ ಸಚಿವ ಡಾ. ಜೀವರಾಜ ಆಳ್ವ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ. ಬಹು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಆಳ್ವರ ದೇಹಸ್ಥಿತಿ ಭಾನುವಾರದಿಂದ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇತ್ತೀಚೆಗಷ್ಟೇ ವಿದೇಶದಿಂದ ಆಗಮಿಸಿದ್ದ ಆಳ್ವ ಅವರು ಕಳೆದ ಕೆಲವು ತಿಂಗಳುಗಳಿಂದ ಮೆದುಳು ಸಂಬಂಧಿ ವ್ಯಾಧಿಯಿಂದ ಬಳಲುತ್ತಿದ್ದರು. ಮಲ್ಯ ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು. ಆದರೆ, ಭಾನುವಾರ ಮಧ್ನಾಹ್ನ ಆಳ್ವ ಉಸಿರಾಟದ ತೊಂದರೆಯಿಂದ ನರಳಿದಾಗ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು.
ಆಳ್ವ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇಡಲಾಗಿದ್ದು, ಕೃತಕ ಉಸಿರಾಟ ಸಾಧನ ಅಳವಡಿಸಲಾಗಿದೆ. ಡಾ. ಸುಭಾಷ್ಚಂದ್ರ ಅವರು ಆಳ್ವರನ್ನು ಉಪಚರಿಸುತ್ತಿದ್ದಾರೆ ಎಂದು ಆಳ್ವರ ಆಪ್ತ ಸಹಾಯಕ ಮೋವಿನ್ ತಿಳಿಸಿದ್ದಾರೆ.
ಹೆಗಡೆ ಭೇಟಿ : ತಮ್ಮ ಆತ್ಮೀಯ ಹಾಗೂ ಕಟ್ಟಾ ಬೆಂಬಲಿಗ ಡಾ. ಆಳ್ವ ಅನಾರೋಗ್ಯದ ವಿಷಯ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ತಮ್ಮ ಗೆಳೆಯನ ಯೋಗಕ್ಷೇಮದ ಬಗ್ಗೆ ವಿಚಾರಿಸಿದರು. ಹುಟ್ಟು ಹೋರಾಟಗಾರರಾದ ಆಳ್ವ ಶೀಘ್ರ ಗುಣಮುಖರಾಗುತ್ತಾರೆ ಎಂಬ ನಂಬಿಕೆ ತಮಗಿದೆ ಎಂದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications