ಏ.15ರಿಂದ ಬೆಂಗಳೂರಲ್ಲಿ ಬಯೋ ಡಾಟ್ ಕಾಂ 2001
ಬೆಂಗಳೂರು : ವಿಜ್ಞಾನ ಮತ್ತು ವಾಣಿಜ್ಯದ ನಡುವೆ ಸ್ನೇಹಸೇತುವಾಗಿ ಕ್ರಾಂತಿಯನ್ನೇ ಸೃಷ್ಟಿಸುವುದೆಂದು ನಿರೀಕ್ಷಿಸಲಾಗಿರುವ ಬಯೋ ಡಾಟ್ ಕಾಂ 2001 ಏಪ್ರಿಲ್ 15ರಿಂದ 17ರವರೆಗೆ ಬೆಂಗಳೂರಿನಲ್ಲಿ ಜರುಗಲಿದೆ. ಈ ವಿಷಯವನ್ನು ಕರ್ನಾಟಕದ ಮಾಹಿತಿ ತಂತ್ರಜ್ಞಾನ ಕಾರ್ಯದರ್ಶಿ ವಿವೇಕ್ ಕುಲಕರ್ಣಿ ಅವರು ಸುದ್ದಿಗೋಷ್ಠಿಯಲ್ಲಿ ಸೋಮವಾರ ಪ್ರಕಟಿಸಿದರು.
ಭಾರತದ ಜೀವತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಅತ್ಯಾಧುನಿಕ ಆವಿಷ್ಕಾರಗಳ ಬಗ್ಗೆ ಈ ಕಾರ್ಯಕ್ರಮ ಬೆಳಕು ಚೆಲ್ಲಲಿದ್ದು, ಆಸಕ್ತರಿಗೆ ಅರಿವು ಮೂಡಿಸಲಿದೆ ಎಂದರು. 2001ನೇ ಸಾಲಿನಲ್ಲಿ ಅಂದಾಜು 2.5 ಬಿಲಿಯನ್ ಅಮೆರಿಕನ್ ಡಾಲರ್ ಹಾಗೂ 2010ನೇ ಸಾಲಿನ ಹೊತ್ತಿಗೆ 4.5 ಬಿಲಿಯನ್ ಅಮೆರಿಕನ್ ಡಾಲರ್ಗಳ ಮಾರುಕಟ್ಟೆ ವ್ಯಾಪ್ತಿಯನ್ನು ಗಳಿಸಲಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಜೈವಿಕ ತಂತ್ರಜ್ಞಾನ ಮಾರುಕಟ್ಟೆ, ಸವಾಲು ಎದುರಿಸಲು ಸಜ್ಜಾಗಿದೆ ಎಂದರು.
ಕರ್ನಾಟಕ ಸರಕಾರ ನೇಮಕ ಮಾಡಿರುವ ಜೈವಿಕ ತಂತ್ರಜ್ಞಾನ ವಿಭಾಗದ ವಿಷನ್ ಗ್ರೂಪ್ ಈ ಕಾರ್ಯಕ್ರಮವನ್ನು ಸಂಘಟಿಸಿದೆ. ಈ ಸಂದರ್ಭದಲ್ಲಿ ಜೈವಿಕ ತಂತ್ರಜ್ಞಾನ ಕ್ಷೇತ್ರದ ಇತ್ತೀಚಿನ ಆವಿಷ್ಕಾರಗಳ ಹಾಗೂ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಸಹ ಏರ್ಪಡಿಸಲಾಗಿದೆ.
(ಯು.ಎನ್.ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications