ಹೈಕೋರ್ಟ್ ಪೀಠ ಸ್ಥಾಪನೆ : ಮುಖ್ಯನ್ಯಾಯಮೂರ್ತಿಗೆ ಮತ್ತೆ ಮನವಿ
ಬೆಂಗಳೂರು : ಉತ್ತರ ಕರ್ನಾಟಕದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಕುರಿತಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ. ವೆಂಕಟರಾಮ ರೆಡ್ಡಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ರಾಜ್ಯ ವಕೀಲರ ಮಂಡಳಿ ಭಾನುವಾರ ನಡೆದ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಿದೆ.
ಎರಡು ವಾರಗಳ ಹಿಂದೆ ಪದಾಧಿಕಾರಿಗಳ ಸಭೆ ನಡೆದಾಗ ಹೈಕೋರ್ಟ್ ಪೀಠ ಸ್ಥಾಪನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಸಲ್ಲಿಸುವ ನಿರ್ಣಯವನ್ನು ಅಂಗೀಕರಿಸಲಾಗಿತ್ತು. ಮಂಡಳಿಯ ಪ್ರತಿನಿಧಿಗಳು ಇನ್ನೆರಡು ದಿನದಲ್ಲಿಯೇ ವೆಂಕಟರಾಮ ರೆಡ್ಡಿ ಅವರನ್ನು ಭೇಟಿಯಾಗುವ ನಿರೀಕ್ಷೆ ಇದೆ.
ನ್ಯಾಯಮೂರ್ತಿ ಅಶೋಕ್ ಭಾನ್ ನೇತೃತ್ವದ ಸಮಿತಿ ಉತ್ತರ ಕರ್ನಾಟಕದ ಯಾವುದೇ ಭಾಗದಲ್ಲಿ ಪೀಠ ಸ್ಥಾಪನೆ ಸಾಧ್ಯವಿಲ್ಲ ಮತ್ತು ಸಾಧುವೂ ಅಲ್ಲ ಎಂದು ಸರಕಾರಕ್ಕೆ ವರದಿ ಸಲ್ಲಿಸಿತ್ತು. ಈ ನಡುವೆ ರಾಜ್ಯಗಳ ಪುನರ್ ವಿಂಗಡಣೆ ಕಾಯ್ದೆ ಅನುಸಾರ ಉತ್ತರ ಕರ್ನಾಟಕದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವುದಾಗಿ ರಾಜ್ಯ ಸರಕಾರ ಸರ್ವಪಕ್ಷ ನಿಯೋಗದೊಂದಿಗೆ ಕೇಂದ್ರ ಸರಕಾರವನ್ನು ಒತ್ತಾಯಿಸಿರುವುದನ್ನು ಇಲ್ಲಿ ಸ್ಮರಿಸಬಹುದು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications