ಐಟಿ ಕ್ಷೇತ್ರದಲ್ಲಿ ಭಾರತ ವಿಶ್ವ ನಾಯಕನಾಗಬೇಕು -ಪ್ರೇಮ್ಜೀ
ಬೆಂಗಳೂರು : ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ತನ್ನ ಗುಣಮಟ್ಟ ಮತ್ತು ಉತ್ತಮ ನಿರ್ವಹಣೆಯಿಂದಾಗಿ ಭಾರತವು ಅಭಿವೃದ್ಧಿ ಹೊಂದುತ್ತಿರುವ ದೇಶಗಳಿಗೆ ಮಾದರಿಯಾಗಿದೆ. ಆದರೆ ಮುಂದಿನ ದಿನಗಳಲ್ಲಿ ದೇಶವು ಜಗತ್ತಿಗೇ ಮಾದರಿಯಾಗಬೇಕು ಎಂದು ವಿಪ್ರೋ ಸಂಸ್ಥೆಯ ಅಧ್ಯಕ್ಷ ಅಜೀಮ್ ಪ್ರೇಮ್ಜೀ ಹೇಳಿದ್ದಾರೆ.
ಅವರು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಲ್ಲಿ ನಡೆದ ‘ಸ್ಟಾಕ್ ಮಾರ್ಕೆಟ್ನಲ್ಲಿ ತಂತ್ರಜ್ಞಾನ ’ ಎಂಬ ವಿಚಾರ ಸಂಕಿರಣದಲ್ಲಿ ಅಧ್ಯಕ್ಷ ಭಾಷಣ ಮಾಡುತ್ತಿದ್ದರು. ಅಟೊಮೊಬೈಲ್ ನಿರ್ಮಾಣ ಕ್ಷೇತ್ರದಲ್ಲಿ ಜಪಾನ್ ಮುಂದುವರೆದಿರುವ ಹಾಗೆಯೇ ಐಟಿ ಕ್ಷೇತ್ರದಲ್ಲಿ ಭಾರತ ಮುಂದೆ ಬರಬೇಕು ಎಂದು ಅವರು ಹೇಳಿದರು.
ಇತ್ತೀಚಿನ ಸರ್ವೆ ಒಂದರ ಪ್ರಕಾರ ಸ್ಟಾಕ್ ಮಾರ್ಕೆಟ್ನ ಟಾಪ್ ಟೆನ್ ಪಟ್ಟಿಯಲ್ಲಿ ಐಟಿ ಮತ್ತು ಟೆಲಿಕಾಂ ಕಂಪೆನಿಗಳಿವೆ. ಭಾರತದ ಆರಂಭಿಕ ಹಂತದಲ್ಲಿರುವ ಐಟಿ ಕಂಪೆನಿಗಳು ಮೊದಲು ಪ್ರಾದೇಶಿಕವಾಗಿ ಬೆಳೆದು ನಂತರ ಜಾಗತಿಕ ಮಾರುಕಟ್ಟೆಯಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಲು ಪ್ರಯತ್ನಿಸಬೇಕು ಎಂದರು.
ಎರಡು ದಿನಗಳ ಕಾಲ ನಡೆಯುವ ಸೆಮಿನಾರ್ನಲ್ಲಿ ಭಾರತೀಯ ಐಟಿ ಕಂಪೆನಿಗಳಿಗೆ ಗ್ಲೋಬಲ್ ಲಿಸ್ಟಿಂಗ್ ಬಗ್ಗೆ ಮಾಹಿತಿ ನೀಡಲಾಗುವುದು. ಸಮಾರಂಭದಲ್ಲಿ ನಾಸ್ಡಾಕ್ ಉಪಾಧ್ಯಕ್ಷ ಆಲ್ಫೆ ್ರಡ್ ಆರ್ ಬರ್ಕ್ಲಿ ಉಪಸ್ಥಿತರಿದ್ದರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications