ಅಪಘಾತ: ಮಾಸ್ಟರ್ ಹಿರಣ್ಣಯ್ಯ ಪ್ರಾಣಾಪಾಯದಿಂದ ಪಾರು
ಶಿವಮೊಗ್ಗ : ಇಲ್ಲಿನ ಸಹ್ಯಾದ್ರಿ ಕಾಲೇಜ್ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಖ್ಯಾತ ರಂಗಭೂಮಿ ಕಲಾವಿದ, ನಟರತ್ನಾಕರ ಮಾಸ್ಟರ್ ಹಿರಣ್ಣಯ್ಯ ಹಾಗೂ ಅವರ ಪುತ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು - ಹೊನ್ನಾವರ ರಸ್ತೆಯಲ್ಲಿ ಬರುತ್ತಿದ್ದ ಹಿರಣ್ಣಯ್ಯ ಅವರ ಕಾರಿಗೆ ಎದುರಿನಿಂದ ಬಂದ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿತು.
ಹಿಂಬದಿಯ ಸೀಟಿನಲ್ಲಿ ಕುಳಿತಿದ್ದ ಮಾಸ್ಟರ್ ಹಿರಣ್ಣಯ್ಯನವರಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ, ಅವರ ಪುತ್ರ ಬಾಬು ಹಿರಣ್ಣಯ್ಯ ಅವರ ತಲೆಗೆ ಪೆಟ್ಟಾಗಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆದರು. ಕಾರು ಸಂಪೂರ್ಣ ಜಖಂ ಗೊಂಡಿದೆ.
ಇಲ್ಲಿನ ವಲ್ಲಭಭಾಯಿ ಪಟೇಲ್ ಸ್ಮಾರಕ ಸಾಂಸ್ಕೃತಿಕ ಕೇಂದ್ರ ಏರ್ಪಡಿಸಿದ್ದ ಸಮಾರಂಭದಲ್ಲಿ ಹಿರಣ್ಣಯ್ಯ ಅವರನ್ನು ಸನ್ಮಾನಿಸುವ ಕಾರ್ಯಕ್ರಮ ಇತ್ತು. ಲಂಚಾವತಾರ ನಾಟಕ ಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಹಿರಣ್ಣಯ್ಯನವರ ಕಾರು ಅಪಘಾತಕ್ಕೀಡಾಯಿತು.
ಅಪಘಾತದ ಹಿನ್ನೆಲೆಯಲ್ಲಿ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ, ಸನ್ಮಾನ ಸಮಾರಂಭ ಹಾಗೂ ನಾಟಕ ಪ್ರದರ್ಶನವನ್ನು ರದ್ದು ಪಡಿಸಲಾಯಿತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications