ಅಬಕಾರಿ ಸುಂಕ ವಂಚನೆಯಿಂದ 1450 ಕೋಟಿ ರು. ನಷ್ಟ
ಬೆಂಗಳೂರು : ಅಬಕಾರಿ ಸುಂಕ ವಂಚನೆಯಿಂದ ಸರಕಾರಕ್ಕೆ ಪ್ರತಿವರ್ಷಸುಮಾರು 1,450 ಕೋಟಿ ರೂಪಾಯಿ ನಷ್ಟವಾಗುತ್ತಿದ್ದರೆ ಬರುತ್ತಿರುವ ಆದಾಯ ಸುಮಾರು ಒಂದು ಸಾವಿರ ಕೋಟಿ ಮಾತ್ರ ಎಂದು ರಾಜ್ಯ ತೆರಿಗೆ ಸುಧಾರಣಾ ಆಯೋಗದ ವರದಿ ಹೇಳಿದೆ.
ಆಯೋಗದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರು ವರದಿಯನ್ನು ಸೋಮವಾರ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು. ದೇಶೀಯವಾಗಿ ತಯಾರಿಸುವ ಮದ್ಯದಿಂದಲೇ ಸುಮಾರು ಒಂದು ಸಾವಿರ ಕೋಟಿ ರೂಪಾಯಿ ತೆರಿಗೆ ವಂಚನೆ ಆಗುತ್ತಿದೆ. ಈ ಸಮಸ್ಯೆ ಪರಿಹರಿಸಲು ಮುಂದಿನ ಬಜೆಟ್‌ನಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದರು. ಈ ಬಗ್ಗೆ ಹೆಚ್ಚಿನ ವಿವರ ನೀಡಲು ಮೊಯ್ಲಿ ನಿರಾಕರಿಸಿದರು.
ತೆರಿಗೆಗೆ ಸಂಬಂಧಿಸಿದಂತೆ, ದಕ್ಷಿಣ ಭಾರತ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ಆಯೋಗ ಮಾಡಿದ ಶಿಫಾರಸ್ಸಿಗೆ ಮುಖ್ಯ ಮಂತ್ರಿಗಳು ಸ್ಪಂದಿಸಿದ್ದಾರೆ ಎಂದೂ ಮೊಯ್ಲಿ ಹೇಳಿದರು. ತೆರಿಗೆ ಹೆಚ್ಚಳದಿಂದ ಯಾವುದೇ ಪ್ರಯೋಜನವಾಗುವುದಿಲ್ಲ , ಬದಲಾಗಿ ತೆರಿಗೆ ಸಂಗ್ರಹ ವಿಧಾನದಲ್ಲಿ ಸುಧಾರಣೆಯಾಗಬೇಕು ಎಂದು ಅವರು ಪ್ರತಿಪಾದಿಸಿದರು.
ಅತಿ ಹೆಚ್ಚು ತೆರಿಗೆ ಸಂಗ್ರಹಿಸುವ ರಾಜ್ಯ ಕರ್ನಾಟಕ ಎಂಬುದು ಸುಳ್ಳು. ತೆರಿಗೆಯಿಂದ ಬರುತ್ತಿರುವ ಆದಾಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಅಂತಹ ಪ್ರಗತಿಯೇನೂ ಆಗಿಲ್ಲ ಎಂದ ಮೊಯ್ಲಿ ಆಯೋಗವು ಅಂತಿಮ ವರದಿಯನ್ನು ಜೂನ್ ತಿಂಗಳ ಹೊತ್ತಿಗೆ ಸರಕಾರಕ್ಕೆ ಸಲ್ಲಿಸಲಿದೆ ಎಂದರು.
(ಯುಎನ್‌ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications