ಮೆಕ್ಕೆಜೋಳ ಖರೀದಿ : ಬಳ್ಳಾರಿ ಬಂದ್ಗೆ ಉತ್ತಮ ಪ್ರತಿಕ್ರಿಯೆ
ಬಳ್ಳಾರಿ : ಕಳೆದ ಎರಡೂವರೆ ತಿಂಗಳಿನಿಂದ ನಿಲ್ಲಿಸಲಾಗಿರುವ ಮೆಕ್ಕೆ ಜೋಳ ಖರೀದಿ ಪ್ರಕ್ರಿಯೆನ್ನು ಆರಂಭಿಸುವಂತೆ ಆಗ್ರಹಿಸಿ ಕರೆ ನೀಡಲಾಗಿರುವ ಬಳ್ಳಾರಿ ಬಂದ್ಗೆ ಮಂಗಳವಾರ ಉತ್ತಮ ಪ್ರತಿಕ್ರಿಯೆ ಕಂಡು ಬಂದಿದೆ. ಒಂದೆರಡು ಅಹಿತಕರ ಘಟನೆಗಳನ್ನು ಹೊರತು ಪಡಿಸಿ ನಗರದ ಪರಿಸ್ಥಿತಿ ಶಾಂತವಾಗಿದೆ.
ಬಂದ್ ಹಿನ್ನೆಲೆಯಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸರಕಾರಿ ಕಚೇರಿಗಳಲ್ಲಿ ಹಾಜರಾತಿ ಕ್ಷೀಣಿಸಿತ್ತು. ಪ್ರತಿಭಟನಕಾರರು ನಾಲ್ಕು ಬಸ್ ಹಾಗೂ ಕೆಲವು ಅಂಗಡಿಗಳ ಮೇಲೆ ಕಲ್ಲುತೂರಿದ ಘಟನೆ ನಡೆಯಿತು. ಪೇಟೆಯ ಎಲ್ಲ ಅಂಗಡಿಗಳೂ ಮುಚ್ಚಿ ಬಂದ್ಗೆ ಬೆಂಬಲ ವ್ಯಕ್ತಪಡಿಸಿದವು. ರಸ್ತೆಗಳಲ್ಲಿ ವಾಹನ ಸಂಚಾರವೂ ಇರಲಿಲ್ಲ. ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.
ಜೋಳಕ್ಕೆ ಬೆಂಕಿ : ಮೆಕ್ಕೆ ಜೋಳ ಖರೀದಿ ನಿಲ್ಲಿಸಿರುವುದನ್ನು ಹಾಗೂ ಗುಲ್ಬರ್ಗಾ ರೈತ ಮುಖಂಡರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಸೋಮವಾರ ಸಹ ಪ್ರತಿಭಟನೆ ನಡೆಸಲಾಗಿತ್ತು. ಜಿಲ್ಲಾ ರೈತ ಹೋರಾಟ ಸಮಿತಿ ನಗರದ ರಾಯಲ್ ವೃತ್ತದಲ್ಲಿ ಮೆಕ್ಕೆಜೋಳಕ್ಕೆ ಬೆಂಕಿಹಾಕಿ ರಸ್ತೆ ತಡೆ ನಡೆಸಿತ್ತು.
ಸರಕಾರ ಹಾಗೂ ಪೊಲೀಸರ ವಿರುದ್ಧ ಘೋಷಣೆ ಕೂಗುತ್ತಾ ರಾಯಲ್ ವೃತ್ತಕ್ಕೆ ಬಂದ ಪ್ರತಿಭಟನೆಕಾರರು ಸೋಮವಾರ ರಸ್ತೆ ತಡೆ ಮಾಡಿದ್ದರು. ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
(ಬಳ್ಳಾರಿ ಪ್ರತಿನಿಧಿಯಿಂದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications