ತೆಂಗಿನ ಮರದ ಸೇಂದಿಗೆ ಅನುಮತಿ : ಪರಿಶೀಲನೆಯಲ್ಲಿ
ಬೆಂಗಳೂರು : ಇನ್ನು ಮೂರು ವರ್ಷಗಳ ಕಾಲ ತೆಂಗಿನ ಮರದಿಂದ ಸೇಂದಿ ತೆಗೆಯಲು ರೈತರಿಗೆ ಅನುಮತಿ ನೀಡಲು ರಾಜ್ಯ ತೋಟಗಾರಿಕಾ ಇಲಾಖೆ ನಿರ್ಧರಿಸಿದೆ.
ತೋಟಗಾರಿಕೆ ಇಲಾಖೆ ಸಚಿವ ಅಲ್ಲಂ ವೀರಭದ್ರಪ್ಪ ಈ ವಿಷಯವನ್ನು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು. ರಾಜ್ಯದಲ್ಲಿ ತೆಂಗು ಬೆಳೆಗೆ ತಗುಲಿದ ನುಸಿರೋಗ ನಿಯಂತ್ರಿಸಲು ಮತ್ತು ರೈತರ ಹಿತ ಕಾಪಾಡುವ ದೃಷ್ಠಿಯಿಂದ ಇಲಾಖೆ ಈ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಆದರೆ ತೆಂಗಿನ ಮರದಿಂದ ಸೇಂದಿ ತೆಗೆಯಲಾರಂಭಿಸಿದರೆ, ಮದ್ಯ ಮಾರಾಟ ಕಡಿಮೆಯಾಗಿ, ಸರಕಾರದ ಬೊಕ್ಕಸಕ್ಕೆ ಆದಾಯ ಕಡಿಮೆಯಾಗುತ್ತಿದೆ ಎಂದು ಅಬ್ಕಾರಿ ಇಲಾಖೆ, ಈ ಕ್ರಮವನ್ನು ವಿರೋಧಿಸುತ್ತಿದೆ.
ತೋಟಗಾರಿಕೆ ಇಲಾಖೆಯ ಈ ಪ್ರಸ್ತಾವನೆಯ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನುಸಿರೋಗದ ಬಾಧೆ ಕಂಡು ಬಂದಿದ್ದು, ತೆಂಗಿನ ಹೂವು ಬಿಡುವ ಮೊದಲೇ ಸೇಂದಿ ತೆಗೆಯುವುದರಿಂದ ಮರಕ್ಕೆ ನುಸಿ ರೋಗ ತಗಲುವ ಸಂಭವ ಕಡಿಮೆಯಾಗುತ್ತದೆ. ಆದ್ದರಿಂದ ಸೇಂದಿ ತೆಗೆಯಲು ಅನುಮತಿ ನೀಡಿದಲ್ಲಿ ರೈತರಿಗೂ ಲಾಭವಾಗುತ್ತದೆ ಎಂದು ವೀರಭದ್ರಪ್ಪ ಅಭಿಪ್ರಾಯ ಪಟ್ಟರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications