ಮೇಲ್ಮನೆ ಸ್ಥಾನಕ್ಕೆ ಕಾಂಗ್ರೆಸ್ನ ನಿರ್ಮಲಾ ವೆಂಕಟೇಶ್ ಆಯ್ಕೆ ಖಚಿತ
ಬೆಂಗಳೂರು : ಕೆಂಪಮ್ಮ ಅವರ ನಿಧನದಿಂದ ತೆರವಾಗಿದ್ದ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ನಿರ್ಮಲಾ ವೆಂಕಟೇಶ್ ಮಾತ್ರ ನಾಮಪತ್ರವನ್ನು ಸಲ್ಲಿಸಿದ್ದು, ಅವರ ಆಯ್ಕೆ ಖಚಿತವಾಗಿದೆ. ಮಂಗಳವಾರ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಗುರುವಾರ ನಾಮಪತ್ರ ವಾಪಸ್ ಪಡೆಯುವ ಕೊನೆಯ ದಿನ.
ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಈ ಚುನಾವಣೆಯಲ್ಲಿ ಮತ್ತಾವುದೇ ರಾಜಕೀಯ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದಿರುವ ಕಾರಣ, ನಾಮಪತ್ರ ವಾಪಸ್ ಪಡೆಯುವ ಕೊನೆಯ ದಿನವಾದ ಗುರುವಾರ ನಿರ್ಮಲಾ ವೆಂಕಟೇಶ್ ಅವರ ಅವಿರೋಧ ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸುವುದು ಬಹುತೇಕ ಖಚಿತ.
ಈ ಸದಸ್ಯತ್ವದ ಅವಧಿ 2004ರ ಮೇ ತಿಂಗಳವರೆಗೆ ಇರುತ್ತದೆ. ನಾಮಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನವಾಗಿತ್ತು. ಕಾಂಗ್ರೆಸ್ ಪಕ್ಷ ಬಹುಮತವನ್ನು ಹೊಂದಿದ್ದು, ಟಿಕೆಟ್ಗಾಗಿ ನಡೆದ ತೀವ್ರ ಸ್ಪರ್ಧೆಯಲ್ಲಿ ನಿರ್ಮಲಾ ಅವರು ಕಾಂಗ್ರೆಸ್ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
ವಿಧಾನ ಪರಿಷತ್ ಕಾರ್ಯದರ್ಶಿ ಹಾಗೂ ಈ ಚುನಾವಣೆಯ ಚುನಾವಣಾಧಿಕಾರಿ ಎಚ್.ಸಿ. ರುದ್ರಪ್ಪ ಅವರಿಗೆ ಸೋಮವಾರ ನಿರ್ಮಲಾ ಅವರು ದ್ವಿಪ್ರತಿಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ನಾಮಪತ್ರದಲ್ಲಿ ಡಿ.ಕೆ. ಶಿವಕುಮಾರ್, ರೋಷನ್ ಬೇಗ್, ವಸಂತ ಸಾಲಿಯಾನ, ಗೋಪಾಲ ಪೂಜಾರಿ, ಜೆ.ಡಿ. ನಾಯಕ್, ಸಗೀರ್ ಅಹ್ಮದ್, ಎಂ. ಶಿವಣ್ಣ, ಎಂ.ಎಂ. ನಾಣಯ್ಯ, ರಾಮಲಿಂಗಾರೆಡ್ಡಿ ಹಾಗೂ ಪ್ರಸನ್ನ ಕುಮಾರ್ ಸೂಚಕರಾಗಿ ಸಹಿ ಮಾಡಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications