ಜರ್ಮನಿ ಮಾರುಕಟ್ಟೆಗೆ ಕಿರ್ಲೋಸ್ಕರ್ ಮಲ್ಟಿ ಮೀಡಿಯಾ
ಬರ್ಲಿನ್ : ಭಾರತದ ಕಂಪ್ಯೂಟರ್ ತಂತ್ರಜ್ಞಾನ ಕಂಪನಿಗಳಲ್ಲಿ ಒಂದಾದ ಕಿರ್ಲೋಸ್ಕರ್ ಮಲ್ಟಿ ಮೀಡಿಯಾ ಗ್ರೂಪ್ ಜರ್ಮನ್ ಭಾಷೆಯಲ್ಲೇ ಮಕ್ಕಳ ಶಿಕ್ಷಣ ಸಾಫ್ಟ್ವೇರ್ ಸಿದ್ಧಪಡಿಸಿದ್ದು, ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಿದ್ಧತೆಯಲ್ಲಿದೆ.
ಬೆಂಗಳೂರು ಮೂಲದ ಕಿರ್ಲೋಸ್ಕರ್ ಮಲ್ಟಿ ಮೀಡಿಯಾ ಸಂಸ್ಥೆಯು ಮೇ ಅಥವಾ ಜೂನ್ ತಿಂಗಳೊಳಗೆ ಬರ್ಲಿನ್ನಲ್ಲಿಯೇ ತನ್ನ ಸಂಸ್ಥೆಯ ಕಚೇರಿಯಾಂದನ್ನು ಸಹ ತೆರೆಯುವ ತಯಾರಿಯಲ್ಲಿದೆ. ಅಮೆರಿಕದಲ್ಲಿ ಇತ್ತೀಚೆಗಷ್ಟೇ ತೆರೆಯಲಾದ ಕಂಪನಿ ಕಚೇರಿಗೆ ಉತ್ತಮ ಪ್ರತಿಕ್ರಿಯೆ ದೊರೆತಿರುವ ಹಿನ್ನೆಲೆಯಲ್ಲಿ ತನ್ನ ಕಾರ್ಯ ವಾಪ್ತಿಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಕಿರ್ಲೋಸ್ಕರ್ ಮಲ್ಟಿ ಮೀಡಿಯಾ ಗ್ರೂಪ್ ಯೋಜಿಸಿದೆ.
ಈ ಉತ್ತೇಜನದಿಂದ ಪ್ರೇರಿತವಾಗಿರುವ ಸಂಸ್ಥೆ ಯುರೋಪ್ ಮಾರುಕಟ್ಟೆಯನ್ನು ಪ್ರವೇಶಿಸುವ ಇರಾದೆಯನ್ನೂ ಹೊಂದಿದೆ. ಈ ವಿಷಯವನ್ನು ಕಿರ್ಲೋಸ್ಕರ್ನ ವ್ಯವಸ್ಥಾಪಕ ನಿರ್ದೇಶಕ ಅಜಯ್ ಕಿರ್ಲೋಸ್ಕರ್ ಇಲ್ಲಿ ತಿಳಿಸಿದ್ದಾರೆ. ಜರ್ಮನಿಯಲ್ಲಿ ತಮ್ಮ ವಹಿವಾಟು ವಿಸ್ತರಿಸುವ ಬಗ್ಗೆ ಮೊದಲಿನಿಂದಲೂ ತಮಗೆ ಆಸಕ್ತಿ ಇತ್ತು ಎಂದು ಹೇಳಿರುವ ಅವರು, ಬರ್ಲಿನ್ನಲ್ಲಿ ಕಾರ್ಯಾರಂಭ ಮಾಡುವ ಕಚೇರಿಯು ಜರ್ಮನಿ, ಆಸ್ಟ್ರೇಲಿಯಾ ಹಾಗೂ ಸಿಟ್ಜರ್ಲೆಂಡ್ ರಾಷ್ಟ್ರಗಳ ಜತೆಗಿನ ವಹಿವಾಟಿಗೆ ಹೆಚ್ಚಿನ ಆದ್ಯತೆ ನೀಡಲಿದೆ ಎಂದೂ ತಿಳಿಸಿದ್ದಾರೆ.
ನಾಲ್ಕರಿಂದ ಹನ್ನೆರಡು ವರ್ಷಗಳ ವಯೋಮಿತಿಯ ಮಕ್ಕಳಿಗಾಗಿ ಸಂಸ್ಥೆ ಜರ್ಮನ್ ಭಾಷೆಯಲ್ಲಿ ಶೈಕ್ಷಣಿಕ ಸಿಡಿ ರೋಮ್ಗಳನ್ನು ತಯಾರಿಸಿ, ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications