ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜರ್ಮನಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್ಸ್‌ಗೆ ಮುಕ್ತ ಅವಕಾಶ

By Staff
|
Google Oneindia Kannada News

ಬೆಂಗಳೂರು : ಭಾರತೀಯ ಸಾಫ್ಟ್‌ವೇರ್‌ ತಂತ್ರಜ್ಞರಿಗೆ ಜರ್ಮನಿಯ ಬಾಗಿಲು ಸದಾ ತೆರೆದಿದೆ. ಭಾರತದ ಬುದ್ಧಿವಂತರಿಗೆ ಜರ್ಮನಿಯಲ್ಲಿ ಮುಕ್ತ ಹಾಗೂ ವಿಫುಲ ಅವಕಾಶಗಳಿವೆ ಎಂದು ಭಾರತದಲ್ಲಿರುವ ಜರ್ಮನಿ ರಾಯಭಾರಿ ಹಿಟೋ ರಿಕ್ಟರ್‌ ತಿಳಿಸಿದ್ದಾರೆ.

ಜರ್ಮನಿಯಲ್ಲಿ ಸಾಫ್ಟ್‌ವೇರ್‌ ಕ್ಷೇತ್ರದಲ್ಲಿ ಸುಮಾರು 20 ಸಾವಿರದಿಂದ ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗಗಳು ಲಭ್ಯ ಇದೆ. ಭಾರತದ ಪ್ರತಿಭಾವಂತರಿಗೆ ಇಲ್ಲಿ ಮುಕ್ತ ಅವಕಾಶ ನೀಡಲಾಗುತ್ತಿದೆ ಎಂದರು. ಈಗಾಗಲೇ ಜರ್ಮನಿ ಸಾಫ್ಟ್‌ವೇರ್‌ ಎಂಜನಿಯರ್‌ಗಳಿಗೆ ಗ್ರೀನ್‌ ಕಾರ್ಡ್‌ಗಳನ್ನು ಸಹ ನೀಡಿದೆ ಎಂದು ಅವರು ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ತಿಳಿಸಿದರು.

ಭಾರತದ ಪ್ರತಿಭಾವಂತ ಕಂಪ್ಯೂಟರ್‌ ತಂತ್ರಜ್ಞರು ಇದರ ಲಾಭವನ್ನು ಪಡೆದುಕೊಳ್ಳಬೇಕೆಂದೂ ಅವರು ಯುವ ಕಂಪ್ಯೂಟರ್‌ ಎಂಜಿನಿಯರ್‌ಗಳಿಗೆ ಕರೆ ನೀಡಿದರು.

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X