ಸಿ.ಇ.ಟಿ. ಅರ್ಜಿಗಾಗಿ 1,20,000 ವಿದ್ಯಾರ್ಥಿಗಳಿಂದ ಬೇಡಿಕೆ
ಬೆಂಗಳೂರು : ಪಾರದರ್ಶಕವಾಗಿ ರಾಜ್ಯದ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸೀಟು ಹಂಚಿಕೆ ಸಲುವಾಗಿ ಮೇ 16 ಮತ್ತು 17ರಂದು ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ ಪ್ರಕ್ರಿಯೆಗೆ ತೀವ್ರ ಚಾಲನೆ ದೊರೆತಿದೆ.
ಪರೀಕ್ಷಾರ್ಥಿಗಳಿಂದ ಈವರೆಗೆ ಬ್ರೋಷರ್ ಹಾಗೂ ಅರ್ಜಿಗಾಗಿ ಲಕ್ಷಾಂತರ ಅರ್ಜಿಗಳು ಬಂದಿವೆ. ಕರ್ನಾಟಕ ರಾಜ್ಯದಿಂದಲೇ ವೃತ್ತಿ ಶಿಕ್ಷಣ ಕೋರ್ಸ್‌ಗಳಿಗೆ ಪ್ರವೇಶ ಬಯಸಿ ಪರೀಕ್ಷೆಗೆ ಕುಳಿತುಕೊಳ್ಳಲು ಅರ್ಜಿ ಸಲ್ಲಿಸಿರುವವರ ಸಂಖ್ಯೆ 61 ಸಾವಿರ ದಾಟಿದೆ. ದೇಶ ಹಾಗೂ ವಿದೇಶಗಳಿಂದ 65 ಸಾವಿರ ಅರ್ಜಿಗಳು ಬಂದಿವೆ.
ಕಳೆದ ವರ್ಷ ಸಿ.ಇ.ಟಿ. ಪರೀಕ್ಷೆಯ ಬ್ರೋಷರ್ ಹಾಗೂ ಅರ್ಜಿಗೆ ಒಂದು ಲಕ್ಷ 4 ಸಾವಿರ ವಿದ್ಯಾರ್ಥಿಗಳಿಂದ ಬೇಡಿಕೆ ಬಂದಿತ್ತು. ಈ ಪೈಕಿ ಕರ್ನಾಟಕದ 45 ಸಾವಿರ ವಿದ್ಯಾರ್ಥಿಗಳೇ ಬೇಡಿಕೆ ಸಲ್ಲಿಸಿದ್ದರು. ಕಳೆದ ವರ್ಷಕ್ಕೆ ಹೋಲಿಸಿದರೆ, ಈ ಬಾರಿ ಅರ್ಜಿಗೆ ಬೇಡಿಕೆ ಹೆಚ್ಚಾಗಿದ್ದು, ಕರ್ನಾಟಕದ ವಿದ್ಯಾರ್ಥಿಗಳಲ್ಲಿ ವೃತ್ತಿ ಶಿಕ್ಷಣದ ಅರಿವು ಮೂಡಿದೆ ಎಂಬುದು ತಿಳಿಯುತ್ತದೆ ಎಂದು ಸಿ.ಇ.ಟಿ ಘಟಕ ತಿಳಿಸಿದೆ.
ಹೊರ ರಾಜ್ಯಗಳಿಂದ ಹಾಗೂ ಹೊರ ದೇಶದಿಂದ ಅರ್ಜಿಗೆ ಬೇಡಿಕೆ ಸಲ್ಲಿಸಿರುವವರಿಗೆ ಅರ್ಜಿ ಹಾಗೂ ಬ್ರೋಷರ್‌ಗಳನ್ನು ಕಳುಹಿಸುವ ಕಾರ್ಯ ಆರಂಭವಾಗಿದೆ. ಅಮೆರಿಕಾ ಹಾಗೂ ಮಲೇಷಿಯಾಗಳಿಂದ ಕೂಡ ಅರ್ಜಿಗೆ ಬೇಡಿಕೆ ಬಂದಿದೆ.
ಕಳೆದ ವರ್ಷ 239ಕ್ಕೂ ಹೆಚ್ಚು ಕೇಂದ್ರಗಳಲ್ಲಿ 34,566 ವಿದ್ಯಾರ್ಥಿನಿಯರೂ ಸೇರಿದಂತೆ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ.ಇ.ಟಿ)ಗೆ ಹಾಜರಾಗಿದ್ದರು. ಈ ಪೈಕಿ 111 ಕೇಂದ್ರಗಳು ಬೆಂಗಳೂರಿನಲ್ಲೇ ಇದ್ದವು. ಈ ಬಾರಿ ಅರ್ಜಿದಾರರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ 300ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಸಾಮಾನ್ಯ ಪ್ರವೇಶ ಪರೀಕ್ಷಾ ಘಟಕ ಚಿಂತಿಸುತ್ತಿದೆ.
ಪರೀಕ್ಷಾ ವೇಳಾಪಟ್ಟಿ : 16-05-2001 ಬುಧವಾರ ಬೆಳಗ್ಗೆ 10ರಿಂದ 11-20ರವರೆಗೆ ಗಣಿತ, ಮಧ್ಯಾಹ್ನ 2-30ರಿಂದ 3-50ರವರೆಗೆ ಜೀವಶಾಸ್ತ್ರ. 17-05-2001 ಗುರುವಾರ ಬೆಳಗ್ಗೆ 10ರಿಂದ 11-20ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2-30ರಿಂದ 3-50ರವರೆಗೆ ರಸಾಯನಶಾಸ್ತ್ರ.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications