ಜಾನ್ರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಕ್ರಿಶ್ಚಿಯನ್ ಸಂಘಟನೆಗಳ ಆಗ್ರಹ
ಬೆಂಗಳೂರು : ಕ್ರಿಶ್ಚಿಯನ್ನರ ಮೇಲೆ ನಡೆದ ಹಲ್ಲೆಗೆ ದೇವರು ಕೊಟ್ಟ ಶಿಕ್ಷೆ ಎಂದು ಗುಜರಾತ್ ಭೂಕಂಪವನ್ನು ಬಣ್ಣಿಸಿ, ಸಂಪುಟದಿಂದ ಹೊರದಬ್ಬಿಸಿಕೊಂಡಿರುವ ಟಿ. ಜಾನ್ ಅವರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಲು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಮನವಿ ಸಲ್ಲಿಸುವಂತೆ ವಿವಿಧ ಕ್ರಿಶ್ಚಿಯನ್ ಸಂಘಟನೆಗಳು ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೊ ಅವರನ್ನು ಶುಕ್ರವಾರ ಒತ್ತಾಯಿಸಿವೆ.
ಜಾನ್ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಅವರನ್ನು ಬಂಧಿಸುವಂತೆ ಒತ್ತಾಯಿಸುತ್ತಿರುವ ಭಾರತೀಯ ಜನತಾ ಪಕ್ಷದ ನಿಲುವನ್ನು ಕ್ರಿಶ್ಚಿಯನ್ ಸಂಘಟನೆಗಳು ಖಂಡಿಸಿವೆ. ನಾವು ಜಾನ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿಲ್ಲ ಎಂದು ಸ್ಪಷ್ಟಪಡಿಸಿರುವ ಸಂಘಟನೆಗಳು ಜಾನ್ ಹೇಳಿಕೆ ಉದ್ದೇಶಪೂರ್ವಕವಾದುದಲ್ಲ ಎಂದು ಅಭಿಪ್ರಾಯಪಟ್ಟಿವೆ. ಈ ಕುರಿತಾದ ಮಾಧ್ಯಮ ಪ್ರಕಟಣೆಯನ್ನು ಶುಕ್ರವಾರ ಬಿಡುಗಡೆ ಮಾಡಿವೆ.
ಸಂಪುಟದಲ್ಲಿನ ಏಕೈಕ ಕ್ರೆೃಸ್ತ ಪ್ರತಿನಿಧಿಯನ್ನು ಸಂಪುಟದಿಂದ ಕೈಬಿಟ್ಟಿರುವ ಬಗ್ಗೆ ವಿಷಾದಿಸಿರುವ ಸಂಘಟನೆಗಳು, ಜಾನ್ರೊಂದಿಗೆ ಸಮುದಾಯದ ಮತ್ತೊಬ್ಬ ಪ್ರತಿನಿಧಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ಕೊಡುವಂತೆ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿವೆ.
(ಪಿಟಿಐ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications