ಗೋದಾಮುಗಳ ನಿರ್ಮಾಣಕ್ಕೆ ಆದ್ಯತೆ - ಧರ್ಮಸ್ಥಳದಲ್ಲಿ ಕೃಷ್ಣ
(ಮಂಗಳೂರು ಪ್ರತಿನಿಧಿಯಿಂದ)
ಧರ್ಮಸ್ಥಳ : ಮುಂದಿನ ಆಯವ್ಯಯದಲ್ಲಿ ಗೋದಾಮುಗಳ ನಿರ್ಮಾಣಕ್ಕಾಗಿ ಹೆಚ್ಚಿನ ಹಣ ಮೀಸಲಿಡುವ ಇಂಗಿತವನ್ನು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವ್ಯಕ್ತಪಡಿಸಿದ್ದಾರೆ.
ಕೃಷ್ಯುತ್ಪನ್ನಗಳಿಗೆ ಸರ್ಕಾರ ಬೆಂಬಲ ಬೆಲೆ ಘೋಷಿಸಿದೆ ನಿಜ. ಆದರೆ, ಖರೀದಿಸಿದ ಉತ್ಪನ್ನಗಳನ್ನು ಸಂಗ್ರಹಿಸಿಡುವುದೆಲ್ಲಿ ಎನ್ನುವ ಸಮಸ್ಯೆಯನ್ನು ಸರ್ಕಾರ ಎದುರಿಸುತ್ತಿದೆ. ಇದಕ್ಕಾಗಿ ರಾಜ್ಯಾದ್ಯಂತ ಗೋದಾಮುಗಳ ನಿರ್ಮಾಣಕ್ಕಾಗಿ ಮುಂದಿನ ಆಯವ್ಯಯದಲ್ಲಿ ಹೆಚ್ಚಿನ ಹಣ ಮೀಸಲಿಡಲು ಸರ್ಕಾರ ಯೋಚಿಸುತ್ತಿದೆ. ಅಂತೆಯೇ ಅಡಿಕೆಗೆ ವಿಧಿಸಿರುವ ಶೇ. 4 ಮಾರುಕಟ್ಟೆ ಶುಲ್ಕವನ್ನು ಕೈ ಬಿಡಬೇಕೆಂಬ ರೈತರ ಬೇಡಿಕೆಯನ್ನೂ ಬಜೆಟ್ ಸಂದರ್ಭದಲ್ಲಿ ಪರಿಶೀಲಿಸಲಾಗುವುದು ಎಂದು ಕೃಷ್ಣ ಹೇಳಿದರು.
ಅವರು, ಶುಕ್ರವಾರ ಧರ್ಮಸ್ಥಳದಲ್ಲಿ ನಡೆದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಸೆಲ್ಕೋ, ಕ್ರೆಡಲ್ ಮತ್ತು ಕರ್ನಾಟಕ ಪುನರ್‌ಬಳಕೆ ಇಂಧನ ಇಲಾಖೆ ಸಹಭಾಗಿತ್ವದಲ್ಲಿ 1000 ಮನೆಗಳ ಸೌರ ವಿದ್ಯುದ್ದೀಕರಣ ಮತ್ತು ಖಾದಿ ಗ್ರಾಮೋದ್ಯೋಗ ನೆರವಿನ 500 ಗೋಬರ್ ಅನಿಲ ಸ್ಥಾವರಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ರಾಜ್ಯದಲ್ಲಿ ಅಸಾಂಪ್ರದಾಯಿಕ ಶಕ್ತಿ ಮೂಲಗಳ ಬಗ್ಗೆ ಜನಜಾಗೃತಿ ಉಂಟು ಮಾಡಬೇಕಿದೆ. ಇದಕ್ಕೆ ಸಂಬಂಧಿಸಿದ ಇಲಾಖೆ ಕ್ರಿಯಾಶೀಲವಾಗಿಲ್ಲ . ಸೌರಶಕ್ತಿ ಬಳಕೆಗೆ ರಾಜ್ಯ ಸರ್ಕಾರ ವಿಶೇಷ ಘಟಕ ಸ್ಥಾಪಿಸಿ ಅದರ ಹೊಣೆಗಾರಿಕೆಯನ್ನು ವಾರ್ತಾ ಸಚಿವ ಬಿ.ಕೆ. ಚಂದ್ರಶೇಖರ್ ಅವರಿಗೆ ವಹಿಸುವುದಾಗಿ ಮುಖ್ಯಮಂತ್ರಿ ಪ್ರಕಟಿಸಿದರು. ಮಹಾರಾಷ್ಟ್ರದ ಅಣ್ಣಾ ಹಜಾರೆ ಮಾದರಿಯಲ್ಲಿ ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಕೃಷ್ಣ ಶ್ಲಾಘಿಸಿದರು.
ರೈತರು ಕಂಗಾಲು, ಸರ್ಕಾರ ಕೈ ಹಿಡಿಯಲಿ : ಬೆಲೆ ಕುಸಿತದಿಂದಾಗಿ ರೈತರೂ ಕುಸಿದಿದ್ದಾರೆ. ಅಡಿಕೆ ಮಾರುಕಟ್ಟೆ ಧಾರಣೆಗೂ ಮುಂಬಯಿ ಷೇರುಪೇಟೆಗೂ ವ್ಯತ್ಯಾಸವೇ ಇಲ್ಲದಂತಾಗಿದೆ. ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಸಮಾರಂಭದಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆ ಹೇಳಿದರು. ಧರ್ಮಸ್ಥಳಕ್ಕೆ ಮಂಜೂರಾಗಿರುವ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣದ ಕಾಮಗಾರಿ ಶೀಘ್ರ ಆರಂಭಿಸುವಂತೆಯೂ, ಕೆಪಿಟಿಸಿಎಲ್‌ನ ಸಬ್ ಸ್ಟೇಷನ್ ಕಾಮಗಾರಿ ಶೀಘ್ರ ಆರಂಭಿಸುವಂತೆಯೂ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಭೂಕಂಪ ಪರಿಹಾರ ನಿಧಿಗೆ 25 ಲಕ್ಷ ದೇಣಿಗೆ : ಇದೇ ಸಂದರ್ಭದಲ್ಲಿ ಗುಜರಾತ್ ಭೂಕಂಪ ಸಂತ್ರಸ್ತ ಪರಿಹಾರ ನಿಧಿಗೆ ಧರ್ಮಸ್ಥಳ ಕ್ಷೇತ್ರ ವತಿಯಿಂದ 25 ಲಕ್ಷ ರುಪಾಯಿ ದೇಣಿಗೆಯನ್ನು ವೀರೇಂದ್ರ ಹೆಗ್ಗಡೆ ಪ್ರಕಟಿಸಿದರು.
ಮೀನುಗಾರಿಕಾ ಸಚಿವ ರಮಾನಾಥ ರೈ, ಸಂಸದ ವಿನಯಕುಮಾರ ಸೊರಕೆ, ಶಾಸಕರಾದ ಅಭಯಚಂದ್ರ ಜೈನ್, ಪ್ರಭಾಕರ ಬಂಗೇರಾ, ಮುಖ್ಯಮಂತ್ರಿಗಳ ಪತ್ನಿ ಪ್ರೇಮಾ, ವೀರೇಂದ್ರ ಹೆಗ್ಗಡೆ ಅವರ ಪತ್ನಿ ಹೇಮಾವತಿ, ಕೈಡಲ್ ಆಡಳಿತ ನಿರ್ದೇಶಕ ಸಿ.ಎಸ್. ವೇದಾಂತ ಹಾಗೂ ಸೆಲ್ಕೋದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications