ಬೆಂಗಳೂರಿನಲ್ಲಿ ಶೀಘ್ರದಲ್ಲೇ ಯಂತ್ರದ ಮೂಲಕ ಪಾಸ್ಪೋರ್ಟ್
ಬೆಂಗಳೂರು : ಯಂತ್ರದ ಮೂಲಕ ಪಾಸ್ಪೋರ್ಟ್ ವಿತರಿಸುವ ದೇಶದ ಪ್ರಥಮ ನಗರ ಎಂಬ ಖ್ಯಾತಿ ಸದ್ಯದಲ್ಲೇ ಬೆಂಗಳೂರಿನದಾಗಲಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಲಲಿತ್ ಮಾನ್ ಸಿಂಗ್ ಹೇಳಿದ್ದಾರೆ.
ಅವರು, ಪಾಸ್ಪೋರ್ಟ್ ಮಾಹಿತಿ ಕಿಯೋಸ್ಕನ್ನು ನಗರದ ಪಾಸ್ಪೋರ್ಟ್ ಕಚೇರಿಯಲ್ಲಿ ಗುರುವಾರ ಉದ್ಘಾಟಿಸಿ ಮಾತನಾಡುತ್ತಿದ್ದರು. ಈಗಾಗಲೇ ದೆಹಲಿಯಲ್ಲಿ ಪಾಸ್ಪೋರ್ಟ್ ಕಚೇರಿಯಲ್ಲಿ ಮಾಹಿತಿ ಕಿಯೋಸ್ಕ್ನ್ನು ಪ್ರಾಯೋಗಿಕವಾಗಿ ಆರಂಭಿಸಲಾಗಿದೆ ಎಂದರು.
ಇತ್ತೀಚೆಗೆ ತಾನೆ ಮಂಗಳೂರಿನಲ್ಲಿ ಪಾಸ್ಪೋರ್ಟ್ ಅರ್ಜಿ ಸಲ್ಲಿಸುವ ಕೇಂದ್ರ ಸ್ಥಾಪಿಸಲಾಗಿದೆ. ಬೇಡಿಕೆಯಿದ್ದರೆ ರಾಜ್ಯದಲ್ಲಿ ಹೊಸದಾಗಿ ಪಾಸ್ಫೋರ್ಟ್ ಕಚೇರಿಗಳನ್ನು ತೆರೆಯಲಾಗುವುದು. ಅಲ್ಲದೆ ಪಾರ್ಸ್ಪೋರ್ಟ್ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದೆ. ಆದಷ್ಟು ಬೇಗನೇ ಅರ್ಜಿಗಳನ್ನು ವಿಲೇವಾರಿ ಮಾಡಲು ಅನುಕೂಲವಾಗುವಂತೆ ಪಾಸ್ಪೋರ್ಟ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಲಲಿತ್ ಮಾನಸಿಂಗ್ ಈ ಸಂದರ್ಭದಲ್ಲಿ ಹೇಳಿದರು.
ಕಿಯೋಸ್ಕನ್ನು ಎಬಿಬಿ ಗ್ರೂಪ್ ನಾಲ್ಕು ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದೆ. ಇದು ಅರ್ಜಿಗಳ ನವೀಕರಣ ಮತ್ತಿತರ ವಿಷಯಗಳ ಬಗ್ಗೆ ಮಾಹಿತಿ ನೀಡಲಿದೆ. ತಮ್ಮ ಅರ್ಜಿಯು ಪರಿಶೀಲನೆಯ ಯಾವ ಹಂತದಲ್ಲಿದೆ ಎಂದೂ ಅರ್ಜಿದಾರರು ಈ ಯಂತ್ರದ ಮೂಲಕ ಪರಿಶೀಲಿಸಬಹುದು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications