ವೀರಪ್ಪನ್ ಬಲಗೈ ಭಂಟ ಸೇತುಕುಳಿ ಗೋವಿಂದನ್ ಬಂಧನ
ಕೊಯಮತ್ತೂರು : ವೀರಪ್ಪನ್ ಶಿಕಾರಿಯಲ್ಲಿ ತೊಡಗಿರುವ ಉಭಯ ರಾಜ್ಯಗಳ ಪೊಲೀಸ್ ಪಡೆ ಶುಕ್ರವಾರ ಯಶಸ್ಸಿನ ಮತ್ತೊಂದು ಮೈಲುಗಲ್ಲನ್ನು ಮುಟ್ಟಿದ್ದು , ವೀರಪ್ಪನ್ ಬಲಗೈ ಭಂಟ ಎಂದು ಹೆಸರಾದ ಸೇತುಕುಳಿ ಗೋವಿಂದನ್ನನ್ನು ಬಂಧಿಸಿದೆ.
ತಮಿಳುನಾಡು- ಕೇರಳ ವಲಯದ ಸಿರುವಾಣಿ ಅರಣ್ಯ ಪ್ರದೇಶದಲ್ಲಿ ಸೇತುಕುಳಿ ಗೋವಿಂದನ್ ಎಸ್ಟಿಎಫ್ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕಾರ್ಯಾಚರಣೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ವಿಶೇಷ ಕಾರ್ಯಪಡೆಯ ಪೊಲೀಸರು ಭಾಗವಹಿಸಿದ್ದರೆಂದು ನಮ್ಮ ಕೊಯಮತ್ತೂರಿನ ಬಾತ್ಮೀದಾರರು ವರದಿ ಮಾಡಿದ್ದಾರೆ.
ಗುರುವಾರವಷ್ಟೇ ರಾಜ್ ಅಪಹರಣದ ನೀಲನಕ್ಷೆ ತಯಾರಿಸಿದ ಕುಖ್ಯಾತ ತಮಿಳು ಉಗ್ರ ಮಾರನ್ ಬಂಧನದ ಖುಷಿಯಲ್ಲಿದ್ದ ಎಸ್ಟಿಎಫ್ಗೆ ಈ ಯಶಸ್ಸು ಮತ್ತಷ್ಟು ಹುಮ್ಮಸ್ಸು ತಂದಿದೆ. ಇದರಿಂದಾಗಿ ವೀರಪ್ಪನ್ ಕೂಡ ಶೀಘ್ರದಲ್ಲೇ ಪೊಲೀಸರ ಬಲೆಗೆ ಸಿಕ್ಕಿ ಬೀಳುವ ಬಗೆಗಿನ ನಿರೀಕ್ಷೆಗಳು ಹೆಚ್ಚಿವೆ.
ಮಾರನ್ ನ್ಯಾಯಾಂಗ ವಶಕ್ಕೆ : ಈ ನಡುವೆ ಗುರುವಾರ ಎಸ್ಟಿಎಫ್ ಪೊಲೀಸರು ಬಂಧಿಸಿದ್ದ ಮಾರನ್ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು , 15 ದಿನಗಳ ಕಾಲ ಆತನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಚೆನ್ನೈ ವರದಿಗಳು ತಿಳಿಸಿವೆ.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ವೀರಪ್ಪನ್ ಶಿಕಾರಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications