ಕರ್ನಾಟಕ ನೀರಾವರಿ ನಿಗಮ ಕಚೇರಿ ಧಾರವಾಡಕ್ಕೆ ವರ್ಗಾವಣೆ
ಬೆಂಗಳೂರು : ದಶಕಗಳ ಹೋರಾಟದ ಬಳಿಕವೂ ಹುಬ್ಬಳ್ಳಿ - ಧಾರವಾಡದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಆಗಲಿಲ್ಲ. ನೈಋತ್ಯ ರೈಲ್ವೆ ವಲಯ ಕಚೇರಿಯೂ ಬರಲಿಲ್ಲ. ಆದರೆ, ಉತ್ತರ ಕರ್ನಾಟಕ ಮಂದಿಗೆ ಸಾಂತ್ವನ ನೀಡುವ ಸುದ್ದಿ ಇದೀಗ ಬಂದಿದೆ. ಕರ್ನಾಟಕ ನೀರಾವರಿ ನಿಗಮದ ಕೇಂದ್ರ ಕಚೇರಿ ಧಾರವಾಡಕ್ಕೆ ಸ್ಥಳಾಂತರಗೊಂಡಿದೆ.
ಉತ್ತರ ಕರ್ನಾಟಕ ಹಾಗೂ ಗ್ರಾಮೀಣಾಭಿವೃದ್ಧಿಯನ್ನು ಕಡೆಗಣಿಸುತ್ತಾ, ಮಾಹಿತಿ ತಂತ್ರಜ್ಞಾನದ ಸುತ್ತಾ ಸುತ್ತುತ್ತಿದ್ದಾರೆ ಎಂಬ ಆರೋಪ ಹೊತ್ತಿರುವ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಕಳೆದ ಸಾಲಿನ ಬಜೆಟ್ ಭಾಷಣದಲ್ಲಿ ಪ್ರಕಟಿಸಿದ್ದಂತೆ ಕರ್ನಾಟಕ ನಿರಾವರಿ ನಿಗಮ ಕೇಂದ್ರ ಕಚೇರಿಯನ್ನು ಬೆಂಗಳೂರಿನಿಂದ ಧಾರವಾಡಕ್ಕೆ ಸ್ಥಳಾಂತರಿಸಲು ಆದೇಶಿಸಿದ್ದು, ಈ ನೂತನ ಕಚೇರಿಯನ್ನು ಫೆ.22ರಂದು ಸ್ವತಂಃ ಮುಖ್ಯಮಂತ್ರಿಗಳೇ ಉದ್ಘಾಟಿಸಲಿದ್ದಾರೆ.
ಈ ವಿಷಯವನ್ನು ರಾಜ್ಯದ ಮಧ್ಯಮ ಮತ್ತು ಬೃಹತ್ ನೀರಾವರಿ ಸಚಿವ ಎಚ್.ಕೆ. ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು. ಪ್ರಾದೇಶಿಕ ಅಸಮತೋಲನವನ್ನು ಹೋಗಲಾಡಿಸಲು ಹಾಗೂ ಅಭಿವೃದ್ಧಿ ಕಾರ್ಯಗಳು ತ್ವರಿತಗತಿಯಲ್ಲಿ ಸಾಗಲು ಅನುವಾಗುವಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಧಾರವಾಡದ ವಾಲ್ಮೀಕಿ ಕಟ್ಟಡದಲ್ಲಿ ಮುಂದಿನ ಗುರುವಾರದಿಂದ ಈ ಕಚೇರಿ ಕಾರ್ಯಾರಂಭ ಮಾಡಲಿದೆ. ಈ ಕಚೇರಿಯ ವ್ಯಾಪ್ತಿಯಲ್ಲಿ ಘಟಪ್ರಭಾ, ಮಲಪ್ರಭಾ, ತುಂಗಾ ಮೇಲ್ದಂಡೆ, ಸಿಂಗಟಾಲೂರು ಏತ ನೀರಾವರಿ, ತುಂಗಾ ಏತ ನೀರಾವರಿ, ಮಾರ್ಕಂಡೇಯ, ಹರಿನಾಳ ಮತ್ತು ಕೃಷ್ಣ ಕಣಿವೆಯ ಯೋಜನೆಗಳು ಬರುತ್ತವೆ ಎಂದೂ ಅವರು ತಿಳಿಸಿದರು.
ಕರ್ನಾಟಕ ರಾಜ್ಯ ನೀರಾವರಿ ನಿಗಮ ಸಾರ್ವಜನಿಕರಿಂದ ಹಾಗೂ ಹಣಕಾಸು ಸಂಸ್ಥೆಗಳಿಂದ ಬಾಂಡ್ ರೂಪದಲ್ಲಿ 616.97 ಕೋಟಿ ರುಪಾಯಿ ಸಂಗ್ರಹಿಸಿದೆ. ಈ ಎಲ್ಲ ನೀರಾವರಿ ಯೋಜನೆಗಳು ಹಾಗೂ ಹೊಸ ಯೋಜನೆಗಳು ತ್ವರಿತ ಗತಿಯಲ್ಲಿ ಸಾಗಲು ಸ್ಥಳಾಂತರಗೊಂಡಿರುವ ಕಚೇರಿ ನೆರವಾಗಲಿದೆ ಎಂಬ ಆಶಾಭಾವನೆಯನ್ನೂ ಅವರು ವ್ಯಕ್ತಪಡಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications