ವಿವಾದಿತ ಫ್ಯಾಷನ್ ಟಿವಿಗೆ ಜೀವದಾನ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯ
ನವದೆಹಲಿ : ಭಾರತದಲ್ಲಿ ವಿವಾದಿತ ಫ್ಯಾಷನ್ ಟಿವಿ ಪ್ರಸಾರವನ್ನು ನಿಷೇಧಿಸುವ ಉದ್ದೇಶ ಕೇಂದ್ರ ಸರ್ಕಾರಕ್ಕಿಲ್ಲ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಫ್ಯಾಷನ್ ಟಿವಿ ತನ್ನ ಕಾರ್ಯಕ್ರಮಗಳಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾದ ಅಗತ್ಯವಿದೆ. ಭಾರತದ ಪ್ರೇಕ್ಷಕರಿಗೆ ಸೂಕ್ತವಾಗುವಂತೆ ತನ್ನ ಕಾರ್ಯಕ್ರಮಗಳನ್ನು ಬದಲಿಸಿಕೊಂಡರೆ, ಫ್ಯಾಷನ್ ಟಿವಿ ಪ್ರಸಾರಕ್ಕೆ ಭಾರತದಲ್ಲಿ ಯಾವುದೇ ಅಡ್ಡಿ ಉಂಟಾಗದು ಎಂದು ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ನಿಷೇಧಕ್ಕೆ ಸಂಸದರ ವಿರೋಧ : ಅಶ್ಲೀಲ ದೃಶ್ಯಗಳನ್ನು ಪ್ರದರ್ಶಿಸುತ್ತಿದೆ ಎನ್ನುವ ಆರೋಪ ಹೊತ್ತಿರುವ ಫ್ಯಾಷನ್ ಟಿವಿ ಪ್ರಸಾರ ನಿಷೇಧಕ್ಕೆ ಕೆಲವು ಸಂಸದರು ವಿರೋಧ ಒಡ್ಡಿರುವ ಸಂಗತಿ ಬೆಳಕಿಗೆ ಬಂದಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಕಾರಣ ನೀಡಿರುವ ಈ ಸಂಸದರು, ಚಾನಲ್ನ ಅಧಿಕಾರಿಗಳೊಂದಿಗೆ ಸರ್ಕಾರ ಸಮಾಲೋಚನೆ ನಡೆಸಿ, ಸರ್ಕಾರದ ಮಾರ್ಗದರ್ಶಿ ಸೂತ್ರಗಳನ್ನು ಅನುಸರಿಸುವಂತೆ ಒತ್ತಾಯಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಬುಧವಾರ ನಡೆದ ಸುಮಾರು 20 ಕ್ಕಿಂತಲೂ ಹೆಚ್ಚು ಸಂಸದರ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ. ಸಚಿವೆ ಸುಷ್ಮಾ ಸ್ವರಾಜ್ ಈ ಸಭೆ ಕರೆದಿದ್ದರು. ಸಂಸದರ ವಿರೋಧದಿಂದಾಗಿ ಫ್ಯಾಷನ್ ಟಿವಿ ನಿಷೇಧದ ನಿರ್ಧಾರವನ್ನು ಕೇಂದ್ರ ಸರ್ಕಾರ ಸದ್ಯಕ್ಕೆ ಕೈ ಬಿಟ್ಟಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications