ಕೇಂದ್ರ ಸರ್ಕಾರದ ವಿರುದ್ಧ ಮಾ.25 ರಂದು ರೈತರ ರ್ಯಾಲಿ
ಬೆಂಗಳೂರು : ರೈತ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಮಾರ್ಚ್ 1 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿ ಸಜ್ಜಾಗುತ್ತಿರುವಂತೆಯೇ, ಅದಕ್ಕೂ ಮುನ್ನ ರೈತ ವಿರೋಧಿ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಬೃಹತ್ ರೈತರ ರ್ಯಾಲಿಯನ್ನು ಸಂಘಟಿಸಲು ಕಾಂಗ್ರೆಸ್ ಉದ್ದೇಶಿಸಿದೆ.
ವಿಶ್ವ ವ್ಯಾಪಾರ ಸಂಘಟನೆಯ ಒಪ್ಪಂದಗಳಿಂದಾಗಿ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇಂದ್ರ ಸರಕಾರದ ಗಮನಕ್ಕೆ ತರಲು, ಫೆ ಬ್ರವರಿ 25ರಂದು ದೆಹಲಿಯಲ್ಲಿ ರೈತರ ಬೃಹತ್ ರ್ಯಾಲಿಯನ್ನು ಆಯೋಜಿಸಲಾಗಿದ್ದು ರಾಜ್ಯದ ಆರು ಸಾವಿರ ಮಂದಿ ರೈತರು ರ್ಯಾಲಿಯಲ್ಲಿ ಭಾಗವಹಿಸುವರು.
ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ರ್ಯಾಲಿಯನ್ನು ನಡೆಸಲಾಗುವುದು. ಪ್ರತಿ ಜಿಲ್ಲೆಯಿಂದ ಕನಿಷ್ಠ 200 ಮಂದಿ ರೈತರನ್ನು ರ್ಯಾಲಿಗೆ ಕಳುಹಿಸಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ವಿ.ಎಸ್. ಕೌಜಲಗಿ ಹೇಳಿದ್ದಾರೆ. ಆಯಾಯ ಜಿಲ್ಲೆಯಿಂದ ಹೊರಡುವ ರೈಲುಗಳಲ್ಲಿ ರೈತರು ದೆಹಲಿಗೆ ಪ್ರಯಾಣಿಸಲಿದ್ದಾರೆ.
ಡಬ್ಲ್ಯೂಟಿಒ ಒಪ್ಪಂದಗಳಿಂದಾಗಿ ಕೃಷಿ ಉತ್ಪನ್ನಗಳ ಬೆಲೆ ತೀರಾ ಕುಸಿಯುತ್ತಿದ್ದು, ರೈತರು ಜೀವನ ನಡೆಸುವುದು ತೀರಾ ದುಸ್ತರವಾಗಿದೆ. ಈ ನಡುವೆ ಇನ್ನಷ್ಟು ವಸ್ತುಗಳ ಆಮದು ಸುಂಕವನ್ನು ತಗ್ಗಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಕೇಂದ್ರದ ರೈತ ವಿರೋಧಿ ಕ್ರಮಗಳನ್ನು ಖಂಡಿಸಲು ರ್ಯಾಲಿ ಏರ್ಪಡಿಸಲಾಗಿದೆ ಎಂದು ಕೌಜಲಗಿ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications