ಒಣಹವೆ ನಡುವೆ ಭೀಮೆಯಲ್ಲಿ ಕಾಣಿಸಿದ ತನುವು
ರಾಜ್ಯಾದ್ಯಂತ ಒಣಹವೆ ಮುಂದುವರಿದಿದ್ದ ಭಾನುವಾರ, ವಿಶೇಷ ರಾಜಕೀಯ ಚಟುವಟಿಕೆಗಳಿಲ್ಲದ ದಿನ. ಪ್ರಸ್ತುತ, ರಾಜಕೀಯ ಚಟುವಟಿಕೆಗಳೇನಿದ್ದರೂ ಕೊಲ್ಲಿಗೇ ಸೀಮಿತ. ಅಪ್ಪನಿಗೆ ತಕ್ಕ ಮಗ ಬುಷ್ ಅಮೆರಿಕದ ಅಧ್ಯಕ್ಷರಾಗುತ್ತಿದ್ದಂತೆಯೇ ನಿರೀಕ್ಷೆಯಂತೆ ಇರಾಕ್‌ನ ನಿದ್ದೆ ಕೆಟ್ಟಿದೆ. ಇರಾಕ್ ಬಾನಂಗಳದಲ್ಲಿ ಅಮೆರಿಕ, ಇಂಗ್ಲೆಂಡ್‌ನ ಫೈಟರ್ ವಿಮಾನಗಳು ಸುಸ್ತಿಲ್ಲದೆ ಗಸ್ತು ಸುತ್ತುತ್ತಿವೆ. ಅದೆಲ್ಲಾ ದೂರದ ವಿದ್ಯಮಾನ ಎಂದು ಇರುವಂತಿಲ್ಲ . ಮತ್ತೆ ಜಾಗತಿಕ ಶಾಂತಿ ಕದಡುತ್ತಿದೆ. ಸ್ವಾವಲಂಬಿ ಅನ್ನುವ ಪದಕ್ಕೆ ಅರ್ಥವೇ ಇಲ್ಲದ ಜಮಾನದಲ್ಲಿ ಇಂಥಾ ವಿದ್ಯಮಾನಗಳು ನೆಮ್ಮದಿ ತರುವಂಥವಲ್ಲ .
ಸದ್ಯಕ್ಕೆ, ಬಿಜಾಪುರ ಜಿಲ್ಲೆಯ ಸುತ್ತಮುತ್ತಲಿನ ಜನರ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಉತ್ತರ ಸಿಕ್ಕಿದೆ. ಮಹಾರಾಷ್ಟ್ರ ಸರ್ಕಾರ ಹಿಡಿದಿಟ್ಟಿದ್ದ ನೀರನ್ನು ಬಿಟ್ಟಿದೆ. ಇದರಿಂದಾಗಿ ಬಿರಿದಿದ್ದ ಭೀಮೆಯಲ್ಲಿ ತನುವು ಕಾಣಿಸಿದೆ. ಇನ್ನಷ್ಟು ನೀರನ್ನು ಬಿಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಸಮಸ್ಯೆಯ ಶಾಶ್ವತ ಪರಿಹಾರ ಕ್ರಮಗಳತ್ತ ಸರ್ಕಾರ ಮುಂದಾಗುತ್ತದೆಂದು, ಬ್ಯಾರೇಜುಗಳನ್ನು ನಿರ್ಮಿಸುತ್ತದೆಂದು ಹಾರೈಸುವ.
ಭಾನುವಾರ ರಾಜ್ಯದ ತಾಪಮಾನದಲ್ಲಿ ಉಬ್ಬರವಿಳಿತಗಳು ಎದ್ದು ಕಾಣುವಂತಿರಲಿಲ್ಲ . ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ ಕುಸಿದಿತ್ತು . ಸದ್ಯಕ್ಕೆ ಇಂಥದ್ದೇ ಹವೆ ರಾಜ್ಯದಲ್ಲಿ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಶುಭ್ರಾಕಾಶ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications