ಹುಷಾರ್ ! ನಿರ್ಲಕ್ಷ್ಯ ತೋರಿದರೆ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ
ಬೆಂಗಳೂರು : ಮುಂದಿನ ಅಧಿವೇಶದನಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶದ ಜನರ ಸಮಸ್ಯೆಗಳನ್ನು ಪರಿಹರಿಸುವತ್ತ ಸರಕಾರ ಗಮನ ಹರಿಸದಿದ್ದರೆ, ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಟ್ಟುಕೊಂಡು ತೀವ್ರ ಪ್ರತಿಭಟನೆ ನಡೆಸುವುದಾಗಿ ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿಯ ಕ್ರಿಯಾ ಸಮಿತಿ ಹೇಳಿದೆ.
ಮಾಜಿ ಮಂತ್ರಿ ವೈಜನಾಥ್ ಪಾಟೀಲ್ ಈ ವಿಷಯವನ್ನು ಸುದ್ದಿಗಾರರಿಗೆ ಸೋಮವಾರ ತಿಳಿಸಿದರು. ಗುಲ್ಬರ್ಗಾ, ರಾಯಚೂರು, ಬಿಜಾಪುರದ ಸುಮಾರು 42 ಕ್ಕೂ ಹೆಚ್ಚು ಹಳ್ಳಿಗಳು ಕುಡಿಯುವ ನೀರಿಲ್ಲದೆ ಬಳಲುತ್ತಿವೆ. ಆದರೆ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಿಂದ ನೀರು ಸರಬರಾಜು ಮಾಡುವ ವಿಷಯದಲ್ಲಿ ರಾಜ್ಯ ಸರಕಾರ ನಿರ್ಲಕ್ಷ್ಯ ತೋರಿಸುತ್ತಿದೆ. ಹೈದರಾಬಾದ್ ಕರ್ನಾಟಕ ಪ್ರದೇಶದ ಮಂದಿಯ ಯಾವುದೇ ಬೇಡಿಕೆ ಮತ್ತು ಸಮಸ್ಯೆಗಳತ್ತ ಸರಕಾರ ಗಮನ ಹರಿಸುತ್ತಿಲ್ಲ ಎಂದು ವೈಜನಾಥ್ ದೂರಿದರು.
ಹೈಕ ಪ್ರದೇಶದ ಮಂದಿಗೆ ಶಿಕ್ಷಣ ಕ್ಷೇತ್ರದಲ್ಲಿಯೂ ಮೋಸವಾಗಿದೆ. ಉದ್ಯೋಗ ನೇಮಕಾತಿಯಲ್ಲಿಯೂ ಇಲ್ಲಿನ ಅಭ್ಯರ್ಥಿಗಳಿಗೆ ಮೋಸವಾಗುತ್ತಿದೆ. ಈ ಎಲ್ಲ ಸಮಸ್ಯೆಗಳ ಬಗ್ಗೆ ಮತ್ತು ಹೈದರಾಬಾದ್ ಕರ್ನಾಟಕ ಪ್ರದೇಶದ ಮಂದಿಯ ಬೇಡಿಕೆಯ ಬಗ್ಗೆ ಸರಕಾರ ಈ ಬಾರಿಯೂ ಗಮನ ಹರಿಸುವ ಸೂಚನೆಗಳು ಕಾಣಿಸುತ್ತಿಲ್ಲ. ಇಂಥ ಸಮಯದಲ್ಲಿ ಕ್ರಿಯಾ ಸಮಿತಿಗೆ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಡದೇ ಬೇರೆ ದಾರಿಯಿಲ್ಲ ಎಂದು ವೈಜನಾಥ್ ಹೇಳಿದರು.
(ಯುಎನ್ಐ)
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications