ಕಳ್ಳಡಿಕೋಡ್ ಬೆಟ್ಟದಲ್ಲಿ ವೀರಪ್ಪನ್ : ಗ್ರಾಮಸ್ಥ ನೀಡಿದ ಸುಳಿವು
ಚಾಮರಾಜನಗರ : ವಾಳಯಾರ್ ಕಾಡಿನಿಂದ ತಪ್ಪಿಸಿಕೊಂಡಿದ್ದ ಕಾಡುಗಳ್ಳ ವೀರಪ್ಪನ್ ಈಗ ಕೇರಳದ ಪಾಲಕ್ಕಾಡ್ ಬಳಿಯ ವಲಿಯಾರಿತ್ತಿ ಕಾನನದಲ್ಲಿ ಅಡಗಿದ್ದಾನೆ ಎಂಬ ಸುಳಿವನ್ನು ಗ್ರಾಮಸ್ಥರೊಬ್ಬರು ನೀಡಿರುವ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ವೀರಪ್ಪನ್ ವಿರುದ್ಧದ ಕಾರ್ಯಾಚರಣೆ ತೀವ್ರಗೊಂಡಿದೆ.
ವೀರಪ್ಪನ್ ಈಗ ಇದೇ ಪ್ರದೇಶದಲ್ಲಿ ಸುತ್ತಾಡುತ್ತಿದ್ದಾನೆ. ಕರಿಮಲೈ ಸಮೀಪದ ಕನ್ನಿಕುಳಂ ಎಂಬ ಪುಟ್ಟ ಗ್ರಾಮದ ನಿವಾಸಿ ಸುಕುಮಾರನ್ ತಾವು ವೀರಪ್ಪನ್‌ನನ್ನು ನೋಡಿದ್ದಾಗಿ ಹೇಳಿದ್ದಾರೆ. ಕಾಡಿನಿಂದ ಮಿಂಚಿನಂತೆ ಹೊರಬಂದ ವೀರಪ್ಪನ್ (ಹಸಿರು ಸಮವಸ್ತ್ರ ತೊಟ್ಟ) ತಂಡದ ಸಹಚರರು ಆ ಪ್ರದೇಶದಲ್ಲಿ ಅಧಿಕಾರಿಗಳು ಅಥವಾ ರಾಜಕಾರಣಿಗಳು ವಾಸ್ತವ್ಯ ಹೂಡಿರುವರೇ ಎಂಬ ಬಗ್ಗೆ ವಿಚಾರಿಸಿದ್ದಾಗಿಯೂ ಅವರು ತಿಳಿಸಿದ್ದಾರೆ.
ಸಾಕಷ್ಟು ಬಳಲಿರುವ ವೀರಪ್ಪನ್‌ನನ್ನು ಈ ತಂಡದೊಂದಿಗೆ ಕಂಡಿದ್ದಾಗಿಯೂ ಸುಕುಮಾರನ್ ಹೇಳಿದ್ದಾರೆ. ತಾವು ಟಿ.ವಿ.ಯಲ್ಲಿ ಹಾಗೂ ಮಾಧ್ಯಮಗಳಲ್ಲಿ ನೋಡಿದ ವ್ಯಕ್ತಿಗಳೇ ಅವರಾಗಿದ್ದರು ಎಂದೂ ಸ್ಪಷ್ಟಪಡಿಸಿದ್ದಾರೆ. ತನ್ನ ಬಲ ಕುಗ್ಗಿರುವ ಹಿನ್ನೆಲೆಯಲ್ಲಿ ಅಧಿಕಾರಿ ಅಥವಾ ರಾಜಕಾರಣಿಯನ್ನು ಅಪಹರಿಸಿ, ಒತ್ತೆಯಾಳಾಗಿಟ್ಟುಕೊಂಡು, ತನ್ನನ್ನು ತಾನು ರಕ್ಷಿಸಿಕೊಳ್ಳಲು ವೀರಪ್ಪನ್ ಯೋಜನೆ ರೂಪಿಸಿರಬಹುದು ಎಂಬ ಶಂಕೆಯೂ ಇದೆ.
ದೊರೆತಿರುವ ಸುಳಿವಿನ ಹಿನ್ನೆಲೆಯಲ್ಲಿ ಎಸ್.ಟಿ.ಎಫ್ ಸಿಬ್ಬಂದಿ ಕಳ್ಳಡಿಕೋಡು ಬೆಟ್ಟ ಪ್ರದೇಶವನ್ನು ಸುತ್ತುವರಿದಿದ್ದು, ವೀರಪ್ಪನ್ ಹಾಗೂ ಆತನ ಸಹಚರರಿಗಾಗಿ ಶೋಧ ಮುಂದುವರಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳೂ ಸ್ಥಳಕ್ಕೆ ಭೇಟಿ ನೀಡಿದ್ದರು ಎಂದು ಎಸ್.ಟಿ.ಎಫ್.ನ ಉನ್ನತ ಮೂಲಗಳು ತಿಳಿಸಿವೆ.
ವಾರ್ತಾಸಂಚಯ
ಮುಖಪುಟ / ವೀರಪ್ಪನ್ ಶಿಕಾರಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications