ಆ್ಯಸಿಡ್ ಪ್ರಕರಣದ ತನಿಖೆಯನ್ನುಸಿಬಿಐಗೆ ಒಪ್ಪಿಸಲು ಸರ್ಕಾರ ಸಿದ್ಧ
ಬೆಂಗಳೂರು : ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಮತ್ತು ಸೊಸೆಯ ಮೇಲೆ ಆ್ಯಸಿಡ್ ಎರಚಿ ಹಲ್ಲೆಗೆ ಯತ್ನಿಸಿರುವ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ರಾಜ್ಯ ಸರಕಾರ ಸಿದ್ಧ ಎಂದು ಭಾರಿ ಮತ್ತು ಮಧ್ಯಮ ನೀರಾವರಿ ಖಾತೆ ಸಚಿವ ಎಚ್. ಕೆ. ಪಾಟೀಲ್ ಹೇಳಿದ್ದಾರೆ.
ವಿರೋಧ ಪಕ್ಷದ ಕೆ. ಎಚ್. ಶ್ರೀನಿವಾಸ್ ಅವರು ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದನ್ನು ಉಲ್ಲೇಖಿಸಿ ಶುಕ್ರವಾರದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಪಾಟೀಲರು ಈಗಾಗಲೇ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲಾಗಿದೆ. ಅಲ್ಲದೆ ಸಮಗ್ರ ತನಿಖೆ ಕುರಿತಂತೆ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಶ್ರೀನಿವಾಸ್ ಜೊತೆ ಸಮಾಲೋಚಿಸಿದ್ದಾರೆ ಎಂದರು.
ದೇವೇಗೌಡ ಅವರು ದೇವರೇ ನ್ಯಾಯ ಕೊಡಲಿ, ಯಾವ ತನಿಖೆಯೂ ಬೇಡ ಎಂದು ಬರೆದಿರುವ ಪತ್ರವನ್ನೂ ಗಮನದಲ್ಲಿಟ್ಟುಕೊಂಡು ಮಂತ್ರಿಮಂಡಲದ ಒಟ್ಟಾರೆ ನಿರ್ಣಯದ ಮೇಲೆ ತನಿಖಾ ಕಾರ್ಯದ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ವಿವರಿಸಿದರು .
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications