ಜನರೇಟರ್ ಇಟ್ಟುಕೊಂಡವರು ಬಚಾವ್
ಬೆಂಗಳೂರು : ಏರುತ್ತಿದೆ ಬಿಸಿಲು, ಇಳಿಯುತ್ತಿದೆ ಬೆವರು, ಈ ಮಧ್ಯೆ ಶರಾವತಿ, ನಾಗಝರಿ ಹಾಗೂ ವಾರಾಹಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಶುಕ್ರವಾರ ಸಂಭವಿಸಿದ ತಾಂತ್ರಿಕ ತೊಂದರೆಯಿಂದ ಬೆಂಗಳೂರೂ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಿದ್ಯುತ್ ನಿಲುಗಡೆ ಆಗಿತ್ತು. ಉರಿಯುವ ಬಿಸಿಲು, ಗಾಳಿ ಸುಳಿಯದ ರಾತ್ರಿಯಲ್ಲಿ ಸರಕಾರಿ ವಿದ್ಯುತ್ತನ್ನೇ ನಂಬಿ ಕೆಟ್ಟವರಿಗೆ ನಮ್ಮ ಅನುತಾಪಗಳು. ಜನರೇಟರ್ ಗಾಳಿಯಲ್ಲಿ ನಿದ್ದೆ ಹೋದವರನ್ನು ಕಂಡರೆ ಹೊಟ್ಟೆ ಕಿಚ್ಚು !
ಪ್ರಮುಖ ಪಟ್ಟಣಗಳಲ್ಲಿ ಕೆಲವೇ ಗಂಟೆಗಳ ನಂತರ ವಿದ್ಯುತ್ ಪೂರೈಕೆ ಆದರೂ, ಇನ್ನೂ ಬಹುತೇಕ ಗ್ರಾಮಗಳು ಗಾಡಾಂಧಕಾರದಲ್ಲಿವೆ. ತಲೆಯ ಮೇಲೆ ಫ್ಯಾನ್ ತಿರುಗದೆ ನಿಜವಾದ ಬಿಸಿಲ ಬೇಗೆಯ ಅನುಭವ ಆಗಿದೆ. ಜನ ಸೆಕೆಯಪ್ಪೋ ಸೆಕೆ ಎನ್ನುತ್ತಿದ್ದಾರೆ. ಇನ್ನೂ ಬೆಂಗಳೂರು, ಹುಬ್ಬಳ್ಳಿ - ಧಾರವಾಡ, ದಕ್ಷಿಣ ಕನ್ನಡ, ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆಡುತ್ತಿದೆ.
ವಿದ್ಯುತ್ ಪೂರೈಕೆ ನಿಂತ ಹಾಗೆಲ್ಲಾ ಬಿಸಿಲ ಝಳ ಎಷ್ಟು ಎಂಬುದು ಮನೆಯಲ್ಲಿ ಕುಳಿತವರಿಗೂ ವೇದ್ಯವಾಗುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಎಂದಿನಂತೆ ಒಣಹವೆ ಮುಂದುವರಿದಿದೆ. ಉತ್ತರ ಒಳನಾಡಿನ ಕೆಲವೆಡೆ, ದಕ್ಷಿಣ ಒಳನಾಡಿನ ಅಲ್ಲಲ್ಲಿ ಕನಿಷ್ಠ ತಾಪಮಾನದಲ್ಲಿ ಇಳಿಕೆ ಕಂಡುಬಂದಿದೆ. ಕರಾವಳಿಯಲ್ಲಿ ಮಾತ್ರ ಅಲ್ಪ ಬದಲಾವಣೆ ಆಗಿದೆ.
ರಾಜ್ಯದ ಅತಿ ಕನಿಷ್ಠ ತಾಪಮಾನ 14.3 ಡಿಗ್ರಿ ಸೆಲ್ಸಿಯಸ್ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿತ್ತು. ಮುನ್ಸೂಚನೆಯಂತೆ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮುಖ್ಯವಾಗಿ ಶುಭ್ರ ಆಕಾಶ ಇದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ಹೇಳಿದೆ ಹವಾಮಾನ ವೀಕ್ಷಣಾಲಯದ ವರದಿ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications