ತತ್ತರಿಸಿದ ದೆಹಲಿ : 6.7 ರಷ್ಟಿದ್ದ ಭೂಕಂಪದ ತೀವ್ರತೆ
ನವದೆಹಲಿ : ಬೆಳಿಗ್ಗೆ 8 ಗಂಟೆ ಸುಮಾರಿಗೆ ಸಂಭವಿಸಿದ ಭೂಕಂಪದಿಂದಾಗಿ ರಾಜಧಾನಿಯ ಜನತೆ ತತ್ತರಿಸಿದ್ದಾರೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.7 ರಷ್ಟಿತ್ತು , ತಕ್ಷಣಕ್ಕೆ ಯಾವುದೇ ಸಾವು ನೋವಿನ ವರದಿಗಳು ಲಭ್ಯವಾಗಿಲ್ಲ ಎಂದು ದೆಹಲಿಯ ಬಾತ್ಮೀದಾರರು ತಿಳಿಸಿದ್ದಾರೆ.
ದೆಹಲಿ ಮಾತ್ರವಲ್ಲದೆ ಗೋರ್ಗಾಂವ್, ನೋಯಿಡಾ, ಗಾಜಿಯಾಬಾದ್ ಹಾಗೂ ಜಮ್ಮು ಮತ್ತು ಕಾಶ್ಮೀರಗಳಲ್ಲೂ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ ಆಪ್ಘಾನಿಸ್ತಾನದಲ್ಲಿತ್ತು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಬೆಳಿಗ್ಗೆ 7.55 ರಿಂದ 7.59 ನಿಮಿಷದವರೆಗೆ ದೆಹಲಿಯಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಗುಜರಾತ್ ಭೂಕಂಪದ ಕರಾಳ ನೆನಪುಗಳ ಹಿನ್ನೆಲೆಯಲ್ಲಿ ಜನತೆ ಭಯಗ್ರಸ್ತರಾಗಿದ್ದಾರೆ. ನಡುಕ ಅನುಭವಕ್ಕೆ ಬಂದ ತಕ್ಷಣ ಗಗನಚುಂಬಿ ಕಟ್ಟಡಗಳಿಂದ ಜನತೆ ರಸ್ತೆಗಳಿಗೆ ಓಡಿ ಬಂದರು ಎಂದು ವರದಿಗಳು ತಿಳಿಸಿವೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications