ಕೋಲಾರದಲ್ಲಿ ಹರಡುತ್ತಿರುವ ಫ್ಲೋರೋಸಿಸ್ ರೋಗ
ಕೋಲಾರ : ಅಂತರ್ಜಲ ಮಟ್ಟದ ಕುಸಿತದಿಂದಾಗಿ ಕುಡಿಯುವ ನೀರಿನಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿರುವುದರಿಂದ ಜಿಲ್ಲೆಯ 264 ಹಳ್ಳಿಗಳಲ್ಲಿ ವಾಸಿಸುತ್ತಿರುವ ಜನ ಫ್ಲೋರೋಸಿಸ್ ರೋಗದಿಂದ ಬಳಲುತ್ತಿದ್ದಾರೆ.
ಜಿಲ್ಲೆಯ ಫ್ಲೋರೋಸಿಸ್ ನಿಯಂತ್ರಣ ಕೇಂದ್ರದ ನಿರ್ದೇಶಕ ಕೆ. ನಾರಾಯಣ ಸ್ವಾಮಿ ಅವರ ಸಮೀಕ್ಷೆಯ ಪ್ರಕಾರ ಸುಮಾರು 18 ಸಾವಿರ ಮಂದಿ ಫ್ಲೋರೋಸಿಸ್ ವ್ಯಾಧಿ ಪೀಡಿತರಾಗಿರುವುದು ಕಂಡು ಬಂದಿದೆ. ಜಿಲ್ಲೆಯ ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲ್ಲೂಕುಗಳಲ್ಲಿ ಅಂತರ್ಜಲ ಮಟ್ಟ 500 ಅಡಿಗಿಂತಲೂ ಆಳಕ್ಕೆ ಹೋಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ದಂತದ ಫ್ಲೋರೋಸಿಸ್ ಮತ್ತು ಎಲುಬಿನ ಫ್ಲೋರೋಸಿಸ್ ರೋಗ ಹಬ್ಬಿದೆ.
ಫ್ಲೋರೋಸಿಸ್ ವ್ಯಾಧಿ ತಕ್ಷಣ ಕಾಣಿಸಿಕೊಳ್ಳುವಂತಹುದಲ್ಲ. ಕಳೆದ ಐದಾರು ವರ್ಷಗಳಲ್ಲಿ ಅತರ್ಜಲ ಮಟ್ಟ ಆಳಕ್ಕೆ ಇಳಿಯುತ್ತಿದ್ದುದರಿಂದ ಕುಡಿಯುವ ನೀರಿನಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿದ್ದು, ಕ್ರಮೇಣ ಈ ರೋಗ ಬೇರೂರಿದೆ. ಇದು ನಿಧಾನವಾಗಿ ಪ್ರಾಣ ತೆಗೆಯುವ ಖಾಯಿಲೆ. ಅಲ್ಲದೆ ಇನ್ನೂ ಅಲ್ಲಿನ ಜನ ಫ್ಲೋರೈಡ್ ಅಂಶ ಜಾಸ್ತಿಯಾಗಿರುವ ನೀರನ್ನೇ ಕುಡಿಯುತ್ತಿರುವುದರಿಂದ ರೋಗಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ.
ಕೋಲಾರದ ಬಾಗೇಪಲ್ಲಿ ತಾಲ್ಲೂಕಿನ ಚೇಳೂರು, ಬಾಗೇಪಲ್ಲಿ ಕಸಬಾ, ಪಾತಪಾಳ್ಯ, ಗೂಳೂರು ಮತ್ತು ಗುಡಿಬಂಡೆಯ ಮಿಟ್ಟೇಮರಿ ಪ್ರದೇಶಗಳಲ್ಲಿ ಫ್ಲೋರೋಸಿಸ್ ರೋಗಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ಸಮೀಕ್ಷೆ ವಿವರಿಸಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications