ರನ್ನ, ಅತ್ತಿಮಬ್ಬೆ, ಚಾವುಂಡರಾಯ ನಾಡಿನ ಮಹಾನ್ ಚೇತನ : ಕಂಬಾರ
ಬೆಂಗಳೂರು : ರನ್ನ, ಅತ್ತಿಮಬ್ಬೆ, ಚಾವುಂಡರಾಯ ಕನ್ನಡ ಸಾಂಸ್ಕೃತಿಕ ಲೋಕದ ಮಹಾನ್ ಚೇತನಗಳು. ರನ್ನ ಸಾಹಿತ್ಯ ಕೃತಿ ರಚಿಸಿದರೆ, ಅತ್ತಿಮಬ್ಬೆ ಸಾಹಿತ್ಯ ಪ್ರಸಾರಕ್ಕೆ ನೆರವಾದಳು, ಚಾವುಂಡರಾಯ ಕಲೆ ಮತ್ತು ಸಂಸ್ಕೃತಿಗೆ ಪ್ರೋತ್ಸಾಹ ನೀಡಿದ ಎಂದು ಖ್ಯಾತ ನಾಟಕಕಾರ, ಸಾಹಿತಿ ಡಾ. ಚಂದ್ರಶೇಖರ ಕಂಬಾರ ಹೇಳಿದರು.
ಭಾನುವಾರ ನಗರದಲ್ಲಿ ಅತ್ತಿಮಬ್ಬೆ ಪ್ರತಿಷ್ಠಾನ ಕೊಡಮಾಡಿದ ರನ್ನ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು. ರನ್ನ ಹಾಗೂ ತಾವು ಇಬ್ಬರೂ ಘಟಪ್ರಭಾ ನದಿಯ ದಂಡೆಯ ಊರಿನಿಂದ ಬಂದವರು ಎಂಬುದು ಹೆಮ್ಮೆಯ ಸಂಗತಿ ಎಂದರು.
ಇದೇ ಸಂದರ್ಭದಲ್ಲಿ ಹಿರಿಯ ಚಿತ್ರನಟಿ ಎಂ.ಎನ್. ಲಕ್ಷ್ಮೀದೇವಿ ಹಾಗೂ ಕಲಾವಿದ ವೀರಣ್ಣ ಸೊಲ್ಲಾಪುರ ಅವರಿಗೂ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಾಜಿ ಸಚಿವೆ ಬಿ.ಟಿ. ಲಲಿತಾನಾಯಕ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಸಮಾರಂಭದಲ್ಲಿ ಸಣ್ಣ ಕೈಗಾರಿಕಾ ಸಚಿವ ಎಸ್.ಆರ್. ಕಾಶಪ್ಪನವರ್, ಮನೋಹರಿ ಪಾರ್ಥಸಾರಥಿ ಮೊದಲಾದವರು ಪಾಲ್ಗೊಂಡಿದ್ದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications