ರಾಜ್ಯದ ಪಾಲಿಗೆ ನಿರಾಶಾದಾಯಕ ರೈಲ್ವೆ ಬಜೆಟ್ - ಎಸ್.ಎಂ.ಕೃಷ್ಣ
ಬೆಂಗಳೂರು : ಕೇಂದ್ರ ರೈಲ್ವೆ ಖಾತೆ ಸಚಿವೆ ಮಮತಾ ಬ್ಯಾನರ್ಜಿ ಸೋಮವಾರ ಸಂಸತ್ತಿನಲ್ಲಿ ಮಂಡಿಸಿದ 2001 ನೇ ಸಾಲಿನ ರೈಲ್ವೆ ಬಜೆಟ್ ರಾಜ್ಯದ ಪಾಲಿಗೆ ತೀವ್ರ ನಿರಾಶೆ ತಂದಿದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದಾರೆ.
ರಾಜ್ಯದ ಆಶೋತ್ತರಗಳನ್ನು ಈಡೇರಿಸುವಲ್ಲಿ ಬಜೆಟ್ ವಿಫಲವಾಗಿದೆ. ರಾಜ್ಯಕ್ಕೆ ಯಾವುದೇ ಹೊಸ ಯೋಜನೆಗಳನ್ನು ಪರಿಚಯಿಸುವಲ್ಲಿಯೂ ಬಜೆಟ್ ಯಶಸ್ವಿಯಾಗಿಲ್ಲ ಎಂದು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಕೃಷ್ಣ ಆಪಾದಿಸಿದರು.
ಪಶ್ಚಿಮ ಬಂಗಾಳ ಗಾದಿಯ ಮೇಲೆ ಕಣ್ಣು : ಬಜೆಟ್ ತುಂಬಾ ರಾಜಕೀಯವೇ ಗೋಚರಿಸುತ್ತದೆ. ರೈಲ್ವೆ ಬಜೆಟ್, ಮಮತಾ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯ ಕುರ್ಚಿಯ ಮೇಲೆ ಕಣ್ಣಿಟ್ಟಿರುವುದನ್ನು ಖಚಿತಪಡಿಸುತ್ತದೆ ಎಂದು ಭಾರೀ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ ರೈಲ್ವೆ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಐಟಿ ಕ್ಷೇತ್ರವನ್ನು ಹೊರತುಪಡಿಸಿದರೆ ಉಳಿದೆಲ್ಲಾ ಕ್ಷೇತ್ರಗಳು ಸಂಕಷ್ಟದಲ್ಲಿರುವಾಗ ಆಕೆ ವಿವಿಧ ಯೋಜನೆಗಳಿಗೆ ಹಣ ತರುವುದಾದರೂ ಎಲ್ಲಿಂದ ಎಂದು ದೇಶಪಾಂಡೆ ಪ್ರಶ್ನಿಸಿದ್ದಾರೆ.
ಪ್ರಯಾಣಿಕರಿಗೆ ಅನುಕೂಲ : ಕರ್ನಾಟಕದ ಬಗ್ಗೆ ವಿಶೇಷ ಗಮನ ಹರಿಸದಿದ್ದರೂ, ಪ್ರಯಾಣಿಕರಿಗೆ ರೈಲ್ವೆ ಬಜೆಟ್ ಫ್ರೆಂಡ್ಲಿಯಾಗಿದೆ ಎಂದು ಫೆಡರೇಷನ್ ಆಫ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಅಭಿಪ್ರಾಯಪಟ್ಟಿದೆ. ಅಪರೂಪದ ಸಂಪನ್ಮೂಲಗಳನ್ನು ಹಿತಕರವಾಗಿ ಬಳಸಿಕೊಳ್ಳುವ ಮಮತಾ ಅವರ ಉದ್ದೇಶವನ್ನು ಚೇಂಬರ್ ಮೆಚ್ಚಿಕೊಂಡಿದೆ.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications