ಜೂನ್‌ನೊಳಗೆ ಮಾರಾಟ ಸಂಶೋಧನಾ ಸಂಸ್ಥೆ ಅಸ್ತಿತ್ವಕ್ಕೆ
ಮಂಗಳೂರು : ರೈತರಿಗೆ ನೇರ ಮಾರಾಟ ವ್ಯವಸ್ಥೆ ಕಲ್ಪಿಸಲು ಹಾಗೂ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡು ಬರುವ ದೃಷ್ಟಿಯಿಂದ ಮಾರಾಟ ಸಂಶೋಧನಾ ಸಂಸ್ಥೆಯನ್ನು ಜೂನ್ ತಿಂಗಳೊಳಗೆ ಪ್ರಾರಂಭಿಸಲಾಗುವುದು ಎಂದು ರಾಜ್ಯ ಕೃಷಿ ಮತ್ತು ಮಾರುಕಟ್ಟೆ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದ್ದಾರೆ.
ಮಂಗಳೂರಿನ ಬೈಕಂಪಾಡಿಯಲ್ಲಿರುವ ನೂತನ ಎಪಿಎಂಸಿ ಯಾರ್ಡ್‌ನಲ್ಲಿ ಅಡಿಕೆ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಬೆಳೆಗಾರರ ಸಮಸ್ಯೆ ಕುರಿತಂತೆ ಚರ್ಚಿಸಲು ಏರ್ಪಟ್ಟ ಸಮಾಲೋಚನಾ ಸಭೆ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ರಾಜ್ಯ ಕೃಷಿ ಮಾರುಕಟ್ಟೆ ಮಂಡಳಿಯು ಮೈಸೂರು, ಧಾರವಾಡ, ಬೆಂಗಳೂರು ವಿವಿ ಸಂಶೋಧನಾ ಕೇಂದ್ರಗಳ ಸಹಾಯದಿಂದ ಅಡಿಕೆ ಬೆಲೆ ಸ್ಥಿರತೆ ಕುರಿತು ಸಮಗ್ರ ಅಧ್ಯಯನ ನಡೆಸಿ ಮುಂದಿನ ಕ್ರಮ ರೂಪಿಸುವುದು ಎಂದರು .
ಒಂದೇ ಹಂತದ ತೆರಿಗೆ : ಜಾಗತೀಕರಣ ಪ್ರಭಾವದಿಂದ ಕೃಷ್ಯುತ್ಪನ್ನಗಳ ಬೆಲೆ ಕುಸಿದಿರುವುದನ್ನು ಸಚಿವರು ಒಪ್ಪಿಕೊಂಡರು. ಮಾರುಕಟ್ಟೆಯಲ್ಲಿ ಅಡಿಕೆಗಿರುವ ವಿವಿಧ ಹಂತಗಳ ತೆರಿಗೆಯನ್ನು ರದ್ದು ಪಡಿಸಿ, ಒಂದೇ ಹಂತದ ತೆರಿಗೆಯನ್ನು ವಿಧಿಸಲಾಗುವುದು. ಮಾರುಕಟ್ಟೆ ತೆರಿಗೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸುವ ಬಗೆಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ತೆರಿಗೆ ಸುಧಾರಣಾ ಆಯೋಗದ ಅಧ್ಯಕ್ಷ ಎಂ. ವೀರಪ್ಪ ಮೊಯಿಲಿ , ನೇರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿದರೆ ಅಡಿಕೆ ಬೆಳೆಗಾರರಿಗೆ ಅನುಕೂಲವಾಗಬಹುದು ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಹಾಜರಿದ್ದ ಶಾಸಕ ಡಿ.ವಿ. ಸದಾನಂದಗೌಡ ಅವರು ಅಡಿಕೆ ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳ ಕಾಟವನ್ನು ತಪ್ಪಿಸುವ ನಿಟ್ಟಿನಲ್ಲಿ ಸಹಕಾರಿ ಸಂಸ್ಥೆಗಳಿಗೆ ಹೆಚ್ಚಿನ ಹಣವನ್ನು ಬಿಡುಗಡೆ ಮಾಡಲು ಸರ್ಕಾರವನ್ನು ಆಗ್ರಹಿಸಿದರು.
ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ರಂಗಮೂರ್ತಿ , ಮಾರುಕಟ್ಟೆಯಲ್ಲಿ ಬೆಲೆ ಸ್ಥಿರತೆ ಕಾಯ್ದುಕೊಳ್ಳಲು ಅನುಕೂಲವಾಗುವಂತೆ ಸಹಕಾರಿ ಸಂಘಗಳಿಗೆ ಸರ್ಕಾರ 50 ಕೋಟಿ ರುಪಾಯಿ ಒದಗಿಸಬೇಕು ಎಂದರು. ಫಾರ್ಮರ್ಸ್ ಫೆಡರೇಷನ್ ಆಫ್ ಇಂಡಿಯಾ ಪ್ರಧಾನ ಕಾರ್ಯದರ್ಶಿ ಎಂ.ಬಿ. ಸದಾಶಿವ, ಅಖಿಲಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಪಿ.ಕೆ.ಎಸ್. ಭಟ್, ಯಶವಂತ ಡೊಂಗ್ರೆ, ಶಾಸಕರಾದ ವಿನಯಚಂದ್ರ, ಯೋಗೀಶ್ ಭಟ್, ಪ್ರಭಾಕರ ಬಂಗೇರಾ, ವಿಜಯಕುಮಾರ ಶೆಟ್ಟಿ, ಗೋಪಾಲಭಂಡಾರಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರಕುಮಾರ್ ಹಾಗೂ ಮಂಗಳೂರು ಎಪಿಎಂಸಿ ಅಧ್ಯಕ್ಷ ಮೆಲ್ವಿನ್ ಡಿಕುನ್ಹಾ ಸಭೆಯಲ್ಲಿ ಹಾಜರಿದ್ದರು.
(ಮಂಗಳೂರು ಪ್ರತಿನಿಧಿಯಿಂದ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications