ಮೈಸೂರು ವಿವಿಯಲ್ಲಿ ಕೃಷ್ಣರಾಜ ಒಡೆಯರ್ ಪೀಠ ಸ್ಥಾಪನೆ : ಕೃಷ್ಣ
ಮೈಸೂರು : ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾಲಯದಲ್ಲಿ ಮೈಸೂರಿನ ಹೆಮ್ಮೆಯ ಅರಸು ಹಾಗೂ ಕವಿ ಸಾರ್ವಭೌಮ ನಾಲ್ವಡಿ ಕೃಷ್ಣರಾಜ ಒಡೆಯರ್ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಪ್ರಕಟಿಸಿದ್ದಾರೆ.
ಅರಮನೆಗಳ ನಗರಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಕೃಷ್ಣ, ನಾಲ್ವಡಿ ಕೃಷ್ಣರಾಜ ಒಡೆಯರ ವಿಚಾರಧಾರೆ - ಚಿಂತನೆ ದೇಶಕ್ಕೇ ಮಾದರಿಯಾಗಿದೆ. ಹಿಂದೆ ಬಹು ಹಿಂದೆಯೇ ಅವರು ಅಧಿಕಾರ ವಿಕೇಂದ್ರೀಕರಣಕ್ಕೆ ನಾಂದಿ ಹಾಡಿದ್ದರು. ಜನಪ್ರತಿನಿಧಿಗಳ ಸಭೆ ರಚಿಸಿ, ಜಿಲ್ಲಾಡಳಿತವನ್ನು ಸ್ವಯಂ ಸ್ಫೂರ್ತಿಯಿಂದ ಜನರಿಗೇ ವಹಿಸಿಕೊಟ್ಟಿದ್ದರು ಎಂದರು.
ಇಂತಹ ಮಹಾನ್ ಆಡಳಿತ ತಜ್ಞರ ಹೆಸರಿನಲ್ಲಿ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠ ಸ್ಥಾಪಿಸುತ್ತಿರುವುದು ಹೆಮ್ಮೆಯ ಸಂಗತಿ. ಈ ಕಾರ್ಯಕ್ಕೆ ರಾಜ್ಯ ಸರಕಾರ ತನ್ನ ಸಂಪೂರ್ಣ ಸಹಕಾರ ನೀಡುವುದು ಎಂದೂ ಅವರು ಪ್ರಕಟಿಸಿದರು.
ಅಧುನಿಕ ಬದುಕಿನ ಅಗತ್ಯಗಳನ್ನು ಅರಿತಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕರ್ನಾಟಕದಲ್ಲಿ ಕೈಗಾರಿಕಾ ಕ್ರಾಂತಿಯನ್ನೇ ಮಾಡಿದರು. ಮೈಸೂರು ಅರಮನೆ, ಕೃಷ್ಣರಾಜ ಸಾಗರ ಜಲಾಶಯ (ಕೆ.ಆರ್.ಎಸ್), ಭದ್ರಾವತಿಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ, ಮೈಸೂರು ಕಾಗದ ಕಾರ್ಖಾನೆ, ಮಂಡ್ಯದ ಸಕ್ಕರೆ ಕಾರ್ಖಾನೆ, ಆಕಾಶವಾಣಿ ಕೇಂದ್ರ, ಶಿಂಷಾ ಜಲವಿದ್ಯುತ್ ಉತ್ಪಾದನಾ ಕೇಂದ್ರಕ್ಕೆ ನೀಡಿದ ಚಾಲನೆ ಒಡೆಯರ ಸಾಧನೆಗಳಿಗೆ ಸಾಕ್ಷಿಯಾಗಿವೆ ಎಂದರು.
ಮೈಸೂರು ಭೇಟಿಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನಗರಾಭಿವೃದ್ಧಿ ಕಚೇರಿ ಆವರಣದಲ್ಲಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ಪುತ್ಥಳಿ ಹಾಗೂ ಗನ್‌ಹೌಸ್ ಎದುರು ಇರುವ ಉದ್ಯಾನವನದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆಯ ಅನಾವರಣ ಮಾಡಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications