ಬೆಂಗಳೂರಲ್ಲಿ ನೂರು ದಾಟಿದ ಬೇಸಗೆ ಮಾರಿ ಪ್ರಕರಣ
ಬೆಂಗಳೂರು : ಕರುಳುಬೇನೆಗೆ ತುತ್ತಾಗಿರುವವರ ಸಂಖ್ಯೆ ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈವರೆಗೆ ನೂರಕ್ಕೂ ಹೆಚ್ಚು ಕರುಳುಬೇನೆ ಪ್ರಕರಣಗಳು ದಾಖಲಾಗಿದ್ದು , ಪಳನಿ (4) ಎನ್ನುವ ಮಗು ಬೇನೆಗೆ ಬಲಿಯಾಗಿದೆ.
ಅಲಸೂರು, ಇಂದಿರಾನಗರ, ಲಕ್ಷ್ಮೀಪುರ, ಬಯ್ಯಪ್ಪನಹಳ್ಳಿ, ಸರಸ್ವತಿಪುರ, ರಾಮಮೂರ್ತಿನಗರ, ತಿಪ್ಪಸಂದ್ರ, ಜೋಗುಪಾಳ್ಯ, ಬಿನ್ನಮಂಗಲ ಮತ್ತಿತರ ಪ್ರದೇಶಗಳಲ್ಲಿ ಕರುಳುಬೇನೆ ವ್ಯಾಪಕವಾಗಿ ಕಾಣಿಸಿಕೊಂಡಿದೆ. ಬೆಂಗಳೂರು ಜಲಮಂಡಳಿ ನೀರು ಪೂರೈಕೆಯ ಕೊಳವೆಯಲ್ಲಿ ಕಲುಷಿತ ನೀರು ಬೆರೆತಿದ್ದು , ಆ ನೀರು ಕುಡಿದದ್ದೇ ಬೇನೆಗೆ ಕಾರಣ ಎಂದು ಶಂಕಿಸಲಾಗಿದೆ.
ಉಲ್ಬಣಗೊಂಡ ವಾಂತಿ ಭೇದಿ ಸಮಸ್ಯೆಯಿಂದಾಗಿ ನೂರಾರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರೆ, ಅನೇಕರು ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಸೋಮವಾರದ ಹೊತ್ತಿಗೆ 76 ರೋಗಿಗಳು ಚಿಕಿತ್ಸೆ ಪಡೆದಿದ್ದರೆ, ಮಂಗಳವಾರ ಕೂಡ 30 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸದ್ಯಕ್ಕೆ ಪುರುಷರ ವಾರ್ಡಿನಲ್ಲಿ 30 ಮಂದಿ ಹಾಗೂ ಮಹಿಳೆಯರ ವಾರ್ಡಿನಲ್ಲಿ 35 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಐಸೊಲೇಷನ್ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಈ ನಡುವೆ ಕರುಳುಬೇನೆ ಕಾಣಿಸಿಕೊಂಡಿರುವ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಹೆಚ್ಚುವರಿ ಕ್ಲೋರಿನ್ ಬೆರೆಸಲು ಜಲಮಂಡಳಿ ನಿರ್ಧರಿಸಿದೆ. ಜಲಮಂಡಳಿಯ ಕಾರ್ಯ ನಿರ್ವಾಹಕ ಇಂಜಿನಿಯರ್ ನೇತೃತ್ವದ ತಂಡ ರೋಗಪೀಡಿತ ಪ್ರದೇಶಗಳಲ್ಲಿ ತಪಾಸಣೆ ನಡೆಸಿ, ಕೆಲವು ಪ್ರದೇಶಗಳ ನೀರನ್ನು ಪರೀಕ್ಷೆಗೊಳಪಡಿಸಿದೆ. ಆದರೆ, ಸಂಗ್ರಹಿಸಿದ ನೀರಿನಲ್ಲಿ ಕಲುಷಿತ ಅಂಶಗಳು ಕಂಡುಬಂದಿಲ್ಲ ಎಂದು ಜಲ ಮಂಡಳಿ ಪ್ರಕಟಣೆ ತಿಳಿಸಿದೆ.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications