ಬೆಂಗಳೂರು: ಕಲುಷಿತ ನೀರು ಸೇವನೆಯಿಂದ ಬಾಲಕನ ಸಾವು
ಬೆಂಗಳೂರು : ಕಲುಷಿತ ನೀರು ಸೇವನೆಯಿಂದ ನಗರದ ಅಲಸೂರಿನಲ್ಲಿ ಸೋಮವಾರ, ಒಬ್ಬ ಬಾಲಕ ಸಾವಿಗೀಡಾಗಿದ್ದು 72 ಮಂದಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಾಂತಿ ಭೇದಿಯಿಂದ ನರಳುತ್ತಿದ್ದ ಜೋಗೂ ಪಾಳ್ಯದ ಪಳನಿ(4) ಎಂಬ ಬಾಲಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಕಳೆದ ಎರಡು ದಿನಗಳಿಂದ ಅಲಸೂರು ಸುತ್ತ ಮುತ್ತಲಿನ ಬೈಯ್ಯಪ್ಪನಹಳ್ಳಿ, ಲಕ್ಷ್ಮೀಪುರ, ಸರಸ್ವತಿಪುರ, ಬಿನ್ನಮಂಗಲ, ಇಂದಿರಾನಗರ, ತಿಪ್ಪ ಸಂದ್ರ ಜೋಗೂಪಾಳ್ಯ ಮತ್ತಿತರ ಪ್ರದೇಶದಲ್ಲಿ ಕಲುಷಿತ ನೀರು ಕುಡಿದು 72 ಮಂದಿ ವಾಂತಿ ಭೇದಿಯಿಂದ ನರಳುತ್ತಿದ್ದಾರೆ.
ಈಗಾಗಲೇ 72 ಮಂದಿಯನ್ನು ಇಲ್ಲಿನ ಐಸೊಲೇಷನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಲುಷತ ನೀರು ಸೇವಿಸಿರುವ ಇನ್ನೂ ಅನೇಕ ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಅಸ್ವಸ್ಥರಾದವರಲ್ಲಿ ಕಾಲರಾ ಲಕ್ಷಣಗಳು ಕಾಣಿಸಿಕೊಂಡಿರುವುದರಿಂದ ನಾಗರಿಕರು ಆತಂಕಗೊಂಡಿದ್ದಾರೆ.
ಜಲಮಂಡಲಿಯ ಕೊಳವೆಯಲ್ಲಿ ಕಲುಷಿತ ನೀರು ಮಿಶ್ರವಾಗಿ, ಅದೇ ನೀರನ್ನು ಕುಡಿದಿರುವುದರಿಂದ ನಾಗರಿಕರು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದ್ದರೂ, ಜಲಮಂಡಲಿ ಇದನ್ನು ನಿರಾಕರಿಸಿದೆ. ಎಂ.ವಿ.ಗಾರ್ಡನ್ ಪ್ರದೇಶದಲ್ಲಿ ತಮಗಿಷ್ಟ ಬಂದ ಹಾಗೆ ಸಾರ್ವಜನಿಕರು ನೀರಿನ ಸಂಪರ್ಕ ತೆಗೆದುಕೊಂಡಿದ್ದಾರೆ. ಅಲ್ಲಿ ನೈರ್ಮಲ್ಯ ಇಲ್ಲದಿರುವುದರಿಂದ ನೀರು ಕಲುಷಿತವಾಗಿದೆ ಎಂದು ಜಲಮಂಡಲಿಯ ಅದ್ಯಕ್ಷ ಎಂ. ಎನ್. ವಿದ್ಯಾಶಂಕರ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications