ಎಳನೀರು, ತಂಪು ಪಾನೀಯ ಮಾರುವವರಿಗೆ ಸುಗ್ಗಿ
ಬೆಂಗಳೂರು : ಉತ್ತರ ಭಾರತದ ಕೆಲವೆಡೆ ಇನ್ನೂ ಭೂಮಿ ನಡುಗುತ್ತಲೇ ಇದೆ. ಹಿಮಾಲಯದ ತಪ್ಪಲಿನಲ್ಲಿ ಚಳಿ ನಡುಗಿಸುತ್ತಿದೆ. ಇತ್ತ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಉರಿ ಬಿಸಿಲು ಏರುತ್ತಿದೆ. ತಂಪು ಪಾನೀಯ ಮಾರುವ ಅಂಗಡಿಗಳ ಮುಂದೆ ಜನಜಂಗುಳಿ ಕಾಣಬರುತ್ತಿದೆ.
ಎಳನೀರು, ಸೌತೆಕಾಯಿ, ಕಲ್ಲಂಗಡಿ ಹಣ್ಣುಗಳಿಗೆ ಭಾರಿ ಬೇಡಿಕೆ ಕಂಡುಬಂದಿದೆ. ಐಸ್ ಕ್ರೀಂ ಅಂತೂ ಭರದಿಂದ ಬಿಕರಿಯಾಗುತ್ತಿದೆ. ಅಂದ ಹಾಗೆ ರಾಜ್ಯದಲ್ಲಿ ಮತ್ತೆ ಒಣಹವೆ ಮುಂದುವರಿದಿದೆ. ದಕ್ಷಿಣ ಒಳನಾಡಿನ ಕೆಲವೆಡೆ ಕನಿಷ್ಠ ತಾಪಮಾನ ಇಳಿಮುಖವಾಗಿ ಸಾಗಿದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಗಳೇನೂ ಕಂಡುಬಂದಿಲ್ಲ.
ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಕನಿಷ್ಠ ತಾಪಮಾನ ಸಾಮಾನ್ಯ ಮಟ್ಟಕ್ಕಿಂತಲೂ ಹೆಚ್ಚಾಗಿತ್ತು. ರಾಜ್ಯದ ಅತಿ ಕನಿಷ್ಠ ತಾಪಮಾನ 13.3 ಡಿಗ್ರಿ ಸೆಲ್ಸಿಯಸ್ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿತ್ತು.
ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ನಾಳಿದ್ದು ಬೆಳಗ್ಗೆ ವರೆಗಿನ ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ನಿರ್ಮಲ ಆಕಾಶ ಇದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರುತ್ತದೆ ಎಂದಿದೆ ಹವಾಮಾನ ವೀಕ್ಷಣಾಲಯದ ವರದಿ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications