ಬಳ್ಳಾರಿ ಜಿಲ್ಲೆಯ 289 ಗ್ರಾಮಗಳಲ್ಲಿ ಕುಡಿವ ನೀರನ ಸಮಸ್ಯೆ
ಬಳ್ಳಾರಿ : ಕರ್ನಾಟಕದಲ್ಲಿ ಬಳ್ಳಾರಿ ಬಿಸಿಲೇ ಬಿಸಿಲು. ಬೀಚಿ ಅವರ ಸಾಹಿತ್ಯ ಪರಿಚಯ ಇರುವವರಿಗೆ ಬಳ್ಳಾರಿಯ ಬಿಸಿಲಿನ ಪರಿಚಯವೂ ಆಗಿರುತ್ತದೆ. ಬೇಸಿಗೆ ಬಂತೆಂದರೆ ಬಳ್ಳಾರಿ ಜಿಲ್ಲೆಯಲ್ಲಿ ಬಿಸಿಲು ಏರುತ್ತದೆ, ನೀರಿನ ಒರತೆ ಕುಗ್ಗುತ್ತಲೇ ಇರುತ್ತದೆ. ಕುಡಿಯುವ ನೀರಿಗೂ ಬರ ಬರುತ್ತದೆ.
ಈಗಾಗಲೇ ಮುಂದಿನ ದಿನಗಳಲ್ಲಿ ಬಳ್ಳಾರಿಯ ಯಾವ ಪ್ರದೇಶಗಳು ಹೆಚ್ಚು ಕುಡಿವ ನೀರಿನ ಸಮಸ್ಯೆಯಿಂದ ತತ್ತರಿಸುತ್ತವೆ ಎಂಬುದನ್ನು ಪಟ್ಟಿ ಮಾಡಲಾಗಿದೆ. ಜಿಲ್ಲೆಯ 289 ಗ್ರಾಮಗಳು ಈ ಪಟ್ಟಿಯಲ್ಲಿ ಸೇರಿವೆ. ತೀವ್ರ ಕುಡಿವ ನೀರಿನ ಸಮಸ್ಯೆ ಎದುರಿಸುವ ಈ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು 220.64 ಲಕ್ಷ ರುಪಾಯಿ ಅಂದಾಜಿನ ಕ್ರಿಯಾ ಯೋಜನೆ ತಯಾರಿಸಿ ಮಂಜೂರಾತಿಗಾಗಿ ಸಲ್ಲಿಸಲಾಗಿದೆ.
ಈ ಯೋಜನಾ ಧನದಿಂದ ಕುಡಿವ ನೀರಿನ ಯೋಜನೆಗಳ ಪುನಶ್ಚೇತನಕ್ಕೆ ಹಾಗೂ ಈಗಾಗಲೇ ಕೈಗೆತ್ತಿಕೊಂಡಿರುವ ಯೋಜನಗೆಳನ್ನು ಪೂರ್ಣಗೊಳಿಸಲು ಬಳಸಲು ಉದ್ದೇಶಿಸಲಾಗಿದೆ. ಈಗಾಗಲೇ ಜಿಲ್ಲಾಡಳಿತ ಬಳ್ಳಾರಿಯ 89, ಸಂಡೂರಿನ 14, ಸಿರುಗುಪ್ಪದ 92, ಹೊಸಪೇಟೆಯ 32, ಹಡಗಲಿಯ 9, ಹಗರಿಬೊಮ್ಮನಹಳ್ಳಿಯ 7, ಕೂಡ್ಲಿಗಿಯ 40 ಹಳ್ಳಿಗಳು ನೀರಿನ ಸಮಸ್ಯೆ ಎದುರಿಸುತ್ತಿವೆ ಎಂದು ಪಟ್ಟಿ ಮಾಡಿದೆ.
(ಬಳ್ಳಾರಿ ಪ್ರತಿನಿಧಿಯಿಂದ)
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications