ಚಂದ್ರಗುತ್ತಿಯಲ್ಲಿ ಅದ್ಧೂರಿ ಜಾತ್ರೆ ವಿರೋಧಿಸಿ ನಿಷೇಧಾಜ್ಞೆ
ಶಿವಮೊಗ್ಗ : ಪುರಾಣ ಪ್ರಸಿದ್ಧ ಚಂದ್ರಗುತ್ತಿ ಜಾತ್ರೆಯನ್ನು ಈ ಬಾರಿಯೂ ನಿಷೇಧಿಸಿ ಜಿಲ್ಲಾಧಿಕಾರಿಗಳು ಆಜ್ಞೆ ಹೊರಡಿಸಿದ್ದಾರೆ.
ಮಾರ್ಚ್ ಒಂದರಿಂದ ಆರರವರೆಗೆ ನಡೆಯಬೇಕಿದ್ದ ಚಂದ್ರಗುತ್ತಿ ಜಾತ್ರೆಯ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲು ಯಾವುದೇ ಅಭ್ಯಂತರವಿಲ್ಲ. ಆದರೆ ಸಂಭ್ರಮದ ಜಾತ್ರೆ ನಡೆಸಲು ಅವಕಾಶ ಇರುವುದಿಲ್ಲ.
ಚಂದ್ರಗುತ್ತಿ ಗ್ರಾಮದಿಂದ ಐದು ಕಿಲೋ ಮೀಟರ್ ವ್ಯಾಪ್ತಿಯವರೆಗೆ ಈ ನಿಷೇಧಾಜ್ಞೆ ಅನ್ವಯಿಸುತ್ತದೆ. ಈ ಅವಧಿಯಲ್ಲಿ ಮದ್ಯ ಮಾರಾಟ ಮತ್ತು ಮದ್ಯಪಾನವನ್ನು ನಿಷೇದಿಸಲಾಗಿದೆ. ಚಂದ್ರಗುತ್ತಿ ಜಾತ್ರೆಗೆ ರಾಜ್ಯ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಬರಲು, ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಹೊರಡಿಸಲಾಗಿದೆ.
ಚಂದ್ರಗುತ್ತಿ ಊರು ಸೊರಬ ತಾಲ್ಲೂಕಿನಲ್ಲಿದೆ. ಇಲ್ಲಿನ ಜಾತ್ರೆಯಲ್ಲಿ ನಡೆಯುತ್ತಿದ್ದ ಬೆತ್ತಲೆ ಸೇವೆಯನ್ನು 1986ರಲ್ಲಿ ನಿಷೇಧಿಸಲಾಗಿತ್ತು. ಇದರಿಂದ ಕೆರಳಿದ ಭಕ್ತರು ನಡೆಸಿದ ಪ್ರತಿಭಟನೆಯಿಂದ ಅಹಿತಕರ ಘಟನೆಗಳು ಸಂಭವಿಸಿದ್ದವು. ಈ ಹಿನ್ನೆಲೆಯಲ್ಲಿ ಸರಕಾರವು ಏಕ ಸದಸ್ಯ ಆಯೋಗವನ್ನು ನೇಮಿಸಿದ್ದು, ಆಯೋಗದ ಶಿಫಾರಸ್ಸಿನಂತೆ ಪ್ರತಿ ವರ್ಷವೂ ಅದ್ದೂರಿಯ ಜಾತ್ರೆಯನ್ನು ನಿಷೇಧಿಸುತ್ತಲೇ ಬಂದಿದೆ.
(ಇನ್ಫೋ ವಾರ್ತೆ)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications