ಚೆಲುವೆಯರ ನಾಡು ವೆನಿಜುವೆಲಾ ಅಧ್ಯಕ್ಷರು ಬೆಂಗಳೂರಿಗೆ ಬರುತ್ತಿದ್ದಾರೆ
ಬೆಂಗಳೂರು : ವೆನಿಜುವೆಲಾದ ಅಧ್ಯಕ್ಷ ಹ್ಯೂಗೋ ಚಾವೇಝ್ ಮೂರು ದಿನಗಳ ತಮ್ಮ ಭಾರತ ಭೇಟಿ ಸಂದರ್ಭದಲ್ಲಿ ಬೆಂಗಳೂರಿಗೂ ಭೇಟಿ ನೀಡಲಿದ್ದಾರೆ. ಅಲ್ಲಿಗೆ ಮತ್ತೊಬ್ಬ ವಿದೇಶಿ ಗಣ್ಯರ ಆಗಮನಕ್ಕೆ ಬೆಂಗಳೂರು ಸಿಂಗರಗೊಳ್ಳುವ ಗಳಿಗೆ ಹತ್ತಿರವಾದಂತಾಯಿತು.
ಮಾರ್ಚ್ 16ರಂದು ಭಾರತಕ್ಕೆ ಆಗಮಿಸಲಿರುವ ಹ್ಯೂಗೋ ಅವರೊಂದಿಗೆ ಉನ್ನತ ಮಟ್ಟದ ಸಮಿತಿ ಕೂಡ ಬರಲಿದ್ದು, ಉದ್ಯಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ವೆನಿಜುವೆಲಾ ರಾಯಭಾರಿ ವಾಲ್ಟರ್ ಮಾರ್ಕ್ವಿಝ್ ಹೇಳಿದ್ದಾರೆ.
ವೆನಿಜುವೆಲಾ ಅಧ್ಯಕ್ಷರೊಂದಿಗೆ ಬರಲಿರುವ ನಿಯೋಗವು ಭಾರತದಲ್ಲಿನ ಐಟಿ ಉದ್ಯಮ ಅವಕಾಶಗಳ ಬಗ್ಗೆ ಅಧ್ಯಯನ ನಡೆಸಲಿದೆ. ವಾಲ್ಟರ್ ಅವರೊಂದಿಗೆ ಪ್ರಸ್ತುತ ಅಲ್ಲಿನ ಅಧಿಕಾರಿಗಳ ಗುಂಪು ಬೆಂಗಳೂರಿನಲ್ಲಿ ಇನ್ಫೋಸಿಸ್, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್, ಕೃಷಿ ವಿಶ್ವ ವಿದ್ಯಾಲಯ ಮತ್ತು ಇಸ್ರೋಗೆ ಭೇಟಿ ನೀಡಲಿದೆ.
ಪ್ರಸ್ತುತ ಐಟಿ ಕ್ಷೇತ್ರದಲ್ಲಿ ಬಂಡವಾಳ ಹೂಡುವ ತನ್ನ ಇಚ್ಛೆಯ ಜೊತೆಗೆ ಇಂಧನ ಪೂರೈಕೆಯ ಮೂಲಕ ಭಾರತದ ವಿದ್ಯುತ್ ಕೊರತೆಯನ್ನು ನೀಗಿಸಲು ವೆನಿಜುವೆಲಾ ಮುಂದೆ ಬಂದಿದೆ.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications