ಕೆನರಾಬ್ಯಾಂಕ್ನ ಎರಡು ಹೊಸ ಎ.ಟಿ.ಎಂ. ಕೌಂಟರ್ ಕಾರ್ಯಾರಂಭ
ಬೆಂಗಳೂರು : ಕರ್ನಾಟಕ ಮೂಲದ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಒಂದಾದ ಕೆನರಾಬ್ಯಾಂಕ್ ತನ್ನ ಗ್ರಾಹಕರಿಗೆ ಉತ್ತಮ ಸೇವೆ ಕಲ್ಪಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಎರಡು ಹೊಸ ಎಟಿಎಂ ಕೌಂಟರ್ಗಳನ್ನು (ಸ್ವಯಂ ಚಾಲಿತ ಹಣ ನೀಡಿಕೆ ಯಂತ್ರ) ಸ್ಥಾಪಿಸಿದೆ.
ಬಸವನಗುಡಿ (ಗಾಂಧೀಬಜಾರ್) ಮತ್ತು ಎಂ.ಜಿ. ರಸ್ತೆಯಲ್ಲಿರುವ ಸ್ಪೆನ್ಸರ್ ಕಟ್ಟಡದ ಶಾಖೆಗಳಲ್ಲಿ ಈ ಯಂತ್ರಗಳನ್ನು ಅಳವಡಿಸಲಾಗಿದೆ. ಬ್ಯಾಂಕಿನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಆರ್.ಜಿ. ಕಾಮತ್ ಅವರು ಬಸವನಗುಡಿಯ ಶಾಖೆಯಲ್ಲೂ ಹಾಗೂ ಬ್ಯಾಂಕಿನ ಕಾರ್ಯ ನಿರ್ವಾಹಕ ನಿರ್ದೇಶಕ ಆರ್.ಪಿ. ಗುಪ್ತಾ ಅವರು ಎಂ.ಜಿ. ರಸ್ತೆಯಲ್ಲೂ ಎ.ಟಿ.ಎಂ. ಕೌಂಟರ್ಗಳನ್ನು ಉದ್ಘಾಟಿಸಿದರು.
ಪ್ರಸ್ತುತ ಕೆನರಾಬ್ಯಾಂಕ್, ಬೆಂಗಳೂರಿನಲ್ಲಿ 7 ಎ.ಟಿ.ಎಂ. ಕೌಂಟರ್ಗಳನ್ನು ಹೊಂದಿದ್ದು, ಅದಕ್ಕೆ ಈ ಎರಡು ಹೊಸ ಕೌಟಂರ್ಗಳ ಸೇರ್ಪಡೆಯಾಗಿದೆ. ಬ್ಯಾಂಕ್ ಈ ವರ್ಷದಲ್ಲೇ ಇನ್ನೂ 9 ಹೊಸ ಕೇಂದ್ರಗಳನ್ನು ತೆರೆಯುವ ಉದ್ದೇಶವನ್ನೂ ಹೊಂದಿದೆ.
ಬೆಂಗಳೂರಿನಲ್ಲಿರುವ 42 ಶಾಖೆಗಳೊಂದಿಗೆ ಈ ಸ್ವಯಂ ಚಾಲಿತ ಯಂತ್ರಗಳು ಸಂಪರ್ಕವನ್ನು ಹೊಂದಿರುತ್ತದೆ. ಇದು ಗ್ರಾಹಕರಿಗೆ ಉತ್ತಮ ಸೌಲಭ್ಯ ಒದಗಿಸುತ್ತದೆ ಎಂದು ಕೆನರಾ ಬ್ಯಾಂಕಿನ ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆ ತಿಳಿಸಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications